ಡೊನಾಲ್ಡ್ ಟ್ರಂಪ್ ರನ್ನು ಭೇಟಿ ಮಾಡಲಿರುವ ನರೇಂದ್ರ ಮೋದಿ – News Mirchi

ಡೊನಾಲ್ಡ್ ಟ್ರಂಪ್ ರನ್ನು ಭೇಟಿ ಮಾಡಲಿರುವ ನರೇಂದ್ರ ಮೋದಿ

ನವದೆಹಲಿ : ನವೆಂಬರ್ 13-14ರಂದು ಫಿಲಿಫೈನ್ಸ್ ರಾಜಧಾನಿ ಮನಿಲಾದಲ್ಲಿ ನಡೆಯಲಿರುವ ಪೂರ್ವ ಏಷ್ಯಾ ಶೃಂಗಸಭೆಯ ಸಂದರ್ಭದಲ್ಲಿ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.

ಉಭಯ ದೇಶಗಳ ಮಧ್ಯೆ ಬಲಿಷ್ಠ ಬಾಂಧವ್ಯದ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ. ಹಿಂದೂ ಮಹಾಸಾಗರ ಮತ್ತು ಮತ್ತು ಪೆಸಿಫಿಕ್ ಸಾಗರದ ಮಧ್ಯೆ ಸಂಪರ್ಕ ಉತ್ತಮ ಪಡಿಸುವ ಕುರಿತು ದ್ವಿಪಕ್ಷೀಯ ಮಾತುಕತೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಪಾಕ್ ನಡೆಸುತ್ತಿರುವ ಭಯೋತ್ಪಾದನಾ ಕೃತ್ಯ  ಕುರಿತೂ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಳೆದ ಜೂನ್ ನಲ್ಲಿ ಅಮೇರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

 

 

 

 

Get Latest updates on WhatsApp. Send ‘Add Me’ to 8550851559

Loading...