ನೌಗಾಮ್ ನಲ್ಲಿ ಇಬ್ಬರು ಉಗ್ರರನ್ನು ಕೊಂದ ಭದ್ರತಾ ಪಡೆಗಳು

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ನೌಗಮ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನದ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿಗೆ ಮುಂದಾದ ನಂತರ ಈ ಘಟನೆ ನಡೆದಿದೆ.

ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಸಿದ ನಂತರ ಯಾರಾದರೂ ಉಗ್ರರು ಒಳನುಸುಳಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ನೌಗಾಮ್ ಸೆಕ್ಟರ್ ನಲ್ಲಿ ಶೋಧ ಕಾರ್ಯ ನಡೆಸಿದ್ದವು. ಕಾರ್ಯಚರಣೆ ವೇಳೆ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಕೊಂದಿವೆ.

ಭಾನುವಾರ ಜಮ್ಮು ಕಾಶ್ಮೀರದ ಪೂಂಚ್ ವಲಯದಲ್ಲಿ ಮೋರ್ಟಾರ್ ಶೆಲ್, ಗುಂಡಿನ ದಾಳಿ ನಡೆಸಿದ್ದವು. ಪಾಕ್ ಪಡೆಗಳ ಗುಂಡಿನ ದಾಳಿಗೆ ಭಾರತೀಯ ಯೋಧ ಮತ್ತು ಆತನ ಪತ್ನಿ ಸಾವನ್ನಪ್ಪಿದ್ದರು. ಪಾಕ್ ದಾಳಿಗೆ ಭಾರತೀಯ ಭದ್ರತಾ ಪಡೆಗಳು ಪ್ರತಿ ದಾಳಿ ಮೂಲಕ ಉತ್ತರ ನೀಡುತ್ತಿವೆ. ಭಾರತದ ಪ್ರತಿದಾಳಿಯಲ್ಲಿ ಪಾಕ್ ನ ಇಬ್ಬರು ಸೈನಿಕರು ಹತರಾಗಿದ್ದು, 6 ಯೋಧರು ಗಾಯೊಗೊಂಡಿದ್ದಾರೆ.