ರಾಯಣ್ಣ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡಿದ್ದ ಡಿ.ವೆಂಕಟೇಶ್ ಅಮಾನತು

***

​ಕೆ.ಎಸ್.ಈಶ್ವರಪ್ಪ ರವರ ನೇತೃತ್ವದ ರಾಯಣ್ಣ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ಆಗಿರುವ ಡಿ. ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿದ್ದಾರೆ. ಈ ಮೂಲಕ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡ ಪಕ್ಷದ ಮುಖಂಡರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದಂತಾಗಿದೆ.

ಪಕ್ಷದ ಮುಖಂಡರ ಎಚ್ಚರಿಕೆಯ ನಂತರವೂ ಬ್ರಿಗೇಡ್ ನಲ್ಲಿ ಗುರುತಿಸಿಕೊಂಡಿದ್ದ ವೆಂಕಟೇಶ ಮೂರ್ತಿಯವರಿಗೆ ಈ ಹಿಂದೆಯೇ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ನೋಟೀಸ್ ನೀಡಲಾಗಿತ್ತು. ಆದರೆ ಅವರಿಂದ ನೋಟೀಸಿಗೆ ಯಾವುದೇ ಉತ್ತರ ಬಾರದ ಕಾರಣ ಪಕ್ಷ ಈ ನಿರ್ಣಯ ಕೈಗೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವೆಂಕಟೇಶ್ ಮೂರ್ತಿ, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ, ಆದರೂ ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ.