ಸೋನಿಯಾ ನಿತೀಶ್ ಭೇಟಿ, ರಾಷ್ಟ್ರ ಮಟ್ಟದಲ್ಲಿ ಮೈತ್ರಿ? – News Mirchi
We are updating the website...

ಸೋನಿಯಾ ನಿತೀಶ್ ಭೇಟಿ, ರಾಷ್ಟ್ರ ಮಟ್ಟದಲ್ಲಿ ಮೈತ್ರಿ?

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾದರು. ಸೋನಿಯಾ ನಿವಾಸಕ್ಕೆ ಆಗಮಿಸಿದ್ದ ನಿತೀಶ್, ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ. ಮೋದಿಯನ್ನು ಎದುರಿಸಲು ರಾಷ್ಟ್ರ ಮಟ್ಟದಲ್ಲಿ ಜ್ಯಾತ್ಯಾತೀತ ಪಕ್ಷಗಳ ಮೈತ್ರಿಕೂಟ ರಚನೆಯಾಗಬೇಕೆಂದು ನಿತೀಶ್ ಬಯಸುತ್ತಿದ್ದಾರೆ. ರಾಜ್ಯದಲ್ಲಿ ಆರ್‌ಜೆಡಿ ಯೊಂದಿಗೆ ಮೈತ್ರಿ ಮಾಡಿಕೊಂಡಿರುವ ನಿತೀಶ್, ಅಗತ್ಯ ಬಿದ್ದರೆ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ನೊಂದಿಗೆ ಕೈಜೋಡಿಸಲು ಸಿದ್ಧವಾದಂತಿದೆ.

ಆದರೆ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿ ನಾಯಕನಾಗಿ ಬಿಂಬಿಸಿಕೊಳ್ಳಲು ಮತ್ತು ಆ ಮೂಲಕ ಪ್ರಧಾನಿ ಮೋದಿಯನ್ನು ವಿರೋಧಿಸುವ ಪಕ್ಷಗಳ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕನಸು ಕಾಣುತ್ತಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಆದರೆ ಪ್ರಧಾನಿ ಅಭ್ಯರ್ಥಿ ವಿಷಯಕ್ಕೆ ಬಂದರೆ ಪ್ರತಿ ಪಕ್ಷದಲ್ಲೂ ಆಕಾಂಕ್ಷಿಗಳಿರುವುದು ನಿತೀಶ್ ಆಸೆ ನೆರವೇರುತ್ತಾ ಎಂಬ ಪ್ರಶ್ನೆ ಉದ್ಭವಿಸದೇ ಇರದು.

Contact for any Electrical Works across Bengaluru

Loading...
error: Content is protected !!