ಪ್ರಧಾನಿ ನರೇಂದ್ರಮೋದಿ ಜಿಎಸ್‍ಟಿ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡುತ್ತಿದ್ದಾರೆ : ಉಸ್ತುವಾರಿ ವೇಣುಗೋಪಾಲ್ ಆರೋಪ – News Mirchi

ಪ್ರಧಾನಿ ನರೇಂದ್ರಮೋದಿ ಜಿಎಸ್‍ಟಿ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡುತ್ತಿದ್ದಾರೆ : ಉಸ್ತುವಾರಿ ವೇಣುಗೋಪಾಲ್ ಆರೋಪ

ಕೊಡಗು : ಪ್ರಧಾನಿ ನರೇಂದ್ರಮೋದಿ ಅವರು ಜಿಎಸ್‍ಟಿ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡುತ್ತಿದ್ದಾರೆ, ಆ ಮೂಲಕ ಜನರನ್ನು ಸಂಕಷ್ಟದಲ್ಲಿ ಸಿಲುಕಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ವೇಣುಗೋಪಾಲ್ ಆರೋಪಿಸಿದ್ದಾರೆ.

ಕೊಡಗಿನಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡ ಅವರು ನೋಟು ಅಮಾನ್ಯೀಕರಣದ ದಿನವಾದ ನವೆಂಬರ್ 8ನ್ನು ಬಿಜೆಪಿ ಸಾಧನೆಯ ದಿನವನ್ನಾಗಿ ಮಾಡಲು ಹೊರಟಿದ್ದರೆ ಕಾಂಗ್ರೆಸ್ ಆ ದಿನವನ್ನು ‘ಕಪ್ಪು ದಿನ’ಎಂದು ಆಚರಿಸಲಿದೆ.  ಕೇಂದ್ರದ ಮೋದಿ ನೇತೃತ್ವದ  ಸರ್ಕಾರ ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ನೀಡಿರುವ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸದಾ ಸಿದ್ಧವಿರುವುದಾಗಿ ಸವಾಲು ಎಸೆದರು. ಟಿಪ್ಪು ಒಬ್ಬ ಸ್ವಾತಂತ್ರ್ಯ ಹೋರಾಟಗಾರನಾಗಿದ್ದು, ಆತನ ಜಯಂತಿಯನ್ನು ರಾಜ್ಯ ಸರ್ಕಾರ ನಡೆಸುತ್ತಿದೆ. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರನೆಂದು ಹೊಗಳಿದ್ದು, ಇದೀಗ ಟಿಪ್ಪು ಬಗ್ಗೆ ಬಿಜೆಪಿಯ ನಿಲುವೇನೆಂದು ಪ್ರಶ್ನಿಸಿದರು.

ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವಾಗಿ ಕೊಡಗಿನ ಕೊಡುಗೆ ಶೂನ್ಯವಾಗಿದ್ದು, ಕಳೆದ ಚುನಾವಣೆಯಲ್ಲಿ ಇಲ್ಲಿನ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಸೋಲನ್ನು ಕಂಡಿದೆ. ಮೊದಲು ಕಾಂಗ್ರೆಸ್ಸಿಗರು ತಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದಾದಲ್ಲಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಮತ್ತು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

 

 

 

 

 

 

Get Latest updates on WhatsApp. Send ‘Add Me’ to 8550851559

Loading...