ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಎಲ್ಲ ಪ್ರಾದೇಶಿಕ ಭಾಷೆಗಳನ್ನು ಉಳಿಸುವಂತೆ ಪ್ರಧಾನಿಗೆ ಪತ್ರ : ಸಿಎಂ – News Mirchi

ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಎಲ್ಲ ಪ್ರಾದೇಶಿಕ ಭಾಷೆಗಳನ್ನು ಉಳಿಸುವಂತೆ ಪ್ರಧಾನಿಗೆ ಪತ್ರ : ಸಿಎಂ

ಬೆಂಗಳೂರು :  ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತು ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಎಲ್ಲ ಪ್ರಾದೇಶಿಕ ಭಾಷೆಗಳನ್ನು ಉಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

62ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸುಪ್ರೀಂಕೋರ್ಟ್ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ನೀಡಿರುವ ತೀರ್ಪು ಕನ್ನಡ ಭಾಷೆಗಷ್ಟೇ ಕುತ್ತು ತರುವಂಥದ್ದಲ್ಲ. ಬದಲಾಗಿ ದೇಶದ ಪ್ರಾದೇಶಿಕ ಭಾಷೆಗಳಿಗೂ ಕುತ್ತು ತರಲಿದೆ.  ಅದರಿಂದ ಪ್ರಾದೇಶಿಕ ಭಾಷೆಗಳನ್ನು ಉಳಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಒತ್ತಾಯಿಸಲಾಗುವುದು ಎಂದರು. ಕನ್ನಡ ಸಾರ್ವಭೌಮ ಭಾಷೆ. ಕನ್ನಡ ನಾಡು ನುಡಿಗೆ ಅವಮಾನವಾಗುವುದನ್ನು ಎಂದಿಗೂ ಸಹಿಸುವುದಿಲ್ಲ. ಕನ್ನಡೇತರರಿಗೂ ಕನ್ನಡ ಕಲಿಸುವ ವಾತಾವರಣವನ್ನು ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಕನ್ನಡ ಧ್ವಜಹಾರಿಸುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಾರಿವಾಳ ಹಾರಿ ಬಿಟ್ಟು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

 

 

Get Latest updates on WhatsApp. Send ‘Add Me’ to 8550851559

Loading...