ಟಿಪ್ಪು ಜಯಂತಿ ವಿರೋಧವನ್ನು ರಾಜಕೀಯವಾಗಿಯೇ ಎದುರಿಸಲಾಗುವುದು : ಡಾ. ಜಿ.ಪರಮೇಶ್ವರ್ – News Mirchi

ಟಿಪ್ಪು ಜಯಂತಿ ವಿರೋಧವನ್ನು ರಾಜಕೀಯವಾಗಿಯೇ ಎದುರಿಸಲಾಗುವುದು : ಡಾ. ಜಿ.ಪರಮೇಶ್ವರ್

ಕೊಡಗು :  ರಾಜ್ಯ ಸರ್ಕಾರ ಆಯೋಜಿಸಿರುವ ‘ಟಿಪ್ಪು ಜಯಂತಿ’ಯನ್ನು ರಾಜಕಾರಣಕ್ಕಾಗಿ ಬಿಜೆಪಿ ನಾಯಕರು ವಿರೋಧಿಸುತ್ತಿದ್ದು, ವಿರೋಧವನ್ನು ರಾಜಕೀಯವಾಗಿಯೇ ಎದುರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಕೊಡಗಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಕರ್ನಾಟಕ ಯಾತ್ರೆ ನವೆಂಬರ್ 8 ರಂದು ಕೊಡಗಿಗೆ ಆಗಮಿಸುವ ಸಂದರ್ಭ ಇಲ್ಲಿನ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು  ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಇವರೆಲ್ಲ ಕೈಲಿ ಖಡ್ಗ ಹಿಡಿದು, ಪೇಟ ತೊಟ್ಟ ವಿಚಾರ ಎಲ್ಲರಿಗೂ ತಿಳಿದಿದೆ ಎಂದರು.

 

 

 

Get Latest updates on WhatsApp. Send ‘Add Me’ to 8550851559

Loading...