ರೋಹಿಣಿ ಸಿಂಧೂರಿ ವರ್ಗಾವಣೆಗೆ ಗೌಡರ ಆಕ್ರೋಶ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದ ಹೆಣ್ಣುಮಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ. ಇದು ದುರಾಡಳಿತದ ಪರಮಾವಧಿ, ಈ ಕುರಿತು ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇನೆ ಎಂದರು ಹೇಳಿದರು.

ಮಹಾಮಸ್ತಕಾಭಿಷೇಕದ ಸಿದ್ಧತೆಗಳಲ್ಲಿ ತೊಡಗಿದ್ದ ಅಧಿಕಾರಿಯನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರ ಒತ್ತಡದ ಮೇಲೆ ವರ್ಗಾವಣೆ ಮಾಡಲಾಗಿದೆ. ಮಾಜಿ ಪ್ರಧಾನಿಯ ತವರಲ್ಲೇ ಹೀಗಾದರೆ ಇನ್ನು ರಾಜ್ಯದ ಪರಿಸ್ಥಿತಿ ಹೇಗಿರಬಹುದು ಎಂದು ಪ್ರಶ್ನಿಸಿದರು. ಮಹಾಮಸ್ತಕಾಭಿಷೇಕದ ಟೆಂಡರ್ ಗಳಲ್ಲಿ ಲಾಭಗಳಿಸಲು ಅಡ್ಡಿಯಾಗಿದ್ದಾರೆಂಬ ಕಾರಣಕ್ಕೆ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ಗೌಡರು ಆರೋಪಿಸಿದರು.