ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ರಿಂದ ಬಗರ್ ಹುಕುಂ ಭೂಮಿ ಕಾನೂನು ಬಾಹಿರವಾಗಿ ಹಂಚಿಕೆ ; ದಿನೇಶ್ ಗುಂಡೂರಾವ್ ಆರೋಪ – News Mirchi

ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ರಿಂದ ಬಗರ್ ಹುಕುಂ ಭೂಮಿ ಕಾನೂನು ಬಾಹಿರವಾಗಿ ಹಂಚಿಕೆ ; ದಿನೇಶ್ ಗುಂಡೂರಾವ್ ಆರೋಪ

ಬೆಂಗಳೂರು :  ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್  ಬಿಜೆಪಿಯಲ್ಲಿನ ತಮ್ಮ  ಅಧಿಕಾರಾಧಿಯಲ್ಲಿ ಬಗರ್ ಹುಕುಂ ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ  ದಿನೇಶ್ ಗುಂಡೂರಾವ್ ಮಾತನಾಡಿ, ಬಿಜೆಪಿ ಮುಖಂಡ ಆರ್. ಅಶೋಕ್ ಅವರು 10 ಸಾವಿರ ಕೋಟಿ ರೂ.ಬೆಲೆ ಬಾಳುವ 2402 ಎಕರೆ,0.27 ಗುಂಟೆ ಜಮೀನನ್ನು ಅಕ್ರಮವಾಗಿ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮವನ್ನು ಉಲ್ಲಂಘಿಸಿ ಮಾಜಿ ಕಾರ್ಪೋರೇಟರ್‌ಗಳು ಮತ್ತು ಅವರ ಕುಟುಂಬದವರಿಗೆ ಬಗರ್ ಹುಕುಂ ಅಡಿ ನೀಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ವರ್ಷಗಳ ಅತಿ ದೊಡ್ಡ ಭೂ ಹಗರಣ ಇದಾಗಿದ್ದು, ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ನಡೆಸಿರುವ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯವಾಗಿದೆ. ರಾಜ್ಯ ಸರ್ಕಾರ ಸ್ವ ಇಚ್ಛೆಯಿಂದ ಕೂಡಲೇ ಕಾನೂನು ಕ್ರಮಕೈಗೊಳ್ಳಬೇಕು. ಮಂಜೂರು ಮಾಡಿರುವ ಜಮೀನು ಮಂಜೂರಾತಿಯನ್ನು ರದ್ದುಪಡಿಸಬೇಕು, ಆ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಅವರ ನಿಜಬಣ್ಣವನ್ನು ಜನರ ಮುಂದೆ ಇಡಲಾಗುವುದು. ಚುನಾವಣೆಯಲ್ಲಿ ಮತದಾರರು ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

 

 

Get Latest updates on WhatsApp. Send ‘Add Me’ to 8550851559

Loading...