ಚುನಾವಣೆ ಹತ್ತಿರವಾಗುತ್ತಿದ್ದಂತೆ ಗರಿಗೆದರಿದ ಚಟುವಟಿಕೆ : ಗ್ರಾಮವಾಸ್ತವ್ಯ ಹೂಡಲಿದ್ದಾರಂತೆ ಹೆಚ್.ಡಿ.ಕೆ – News Mirchi

ಚುನಾವಣೆ ಹತ್ತಿರವಾಗುತ್ತಿದ್ದಂತೆ ಗರಿಗೆದರಿದ ಚಟುವಟಿಕೆ : ಗ್ರಾಮವಾಸ್ತವ್ಯ ಹೂಡಲಿದ್ದಾರಂತೆ ಹೆಚ್.ಡಿ.ಕೆ

ಬೆಂಗಳೂರು : ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲ ಪಕ್ಷಗಳಲ್ಲಿಯೂ ಕಾರ್ಯಚಟುವಟಿಕೆಗಳು ಗರಿಗೆದರಿವೆ.

ಮತದಾರರನ್ನು ಸೆಳೆಯಲು ಮುಂದಾಗಿರುವ ರಾಜಕೀಯ ಪಕ್ಷಗಳು ವಿವಿಧ ರೀತಿಯಲ್ಲಿ ಕಸರತ್ತು ನಡೆಸುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪನವರು ಪರಿವರ್ತನಾ ರ್ಯಾಲಿ ಹಮ್ಮಿಕೊಂಡರೆ ಇನ್ನೋರ್ವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ. ಬಿಜೆಪಿ ಈಗಾಗಲೇ ಯಾತ್ರೆ ಹೊರಟಿದ್ದು, ರಾಜ್ಯಸರ್ಕಾರದ ಜನವಿರೋಧಿ ನೀತಿಗಳನ್ನು ಜನರ ಮುಂದಿಡುತ್ತಿದೆ. ಕಾಂಗ್ರೆಸ್ ಕೂಡ ಜನಾಶೀರ್ವಾದ ಯಾತ್ರೆ ನಡೆಸಲಿದ್ದು, ಬಿಜೆಪಿಯಲ್ಲಿನ ಭ್ರಷ್ಟಾಚಾರ ಹಗರಣಗಳನ್ನು ಜನತೆಯ ಮುಂದಿರಿಸಲಿದೆ. ಅದೇ ರೀತಿ ಕುಮಾರಸ್ವಾಮಿಯವರು ನವೆಂಬರ್ ಏಳರಿಂದ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದ್ದು, ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಪ್ರವಾಸ ಆರಂಭಿಸಲಿದ್ದಾರೆ.

ಪ್ರವಾಸದ ವೇಳೆ ಗ್ರಾಮವಾಸ್ತವ್ಯ ಹೂಡಲಿದ್ದು, ಮತದಾರರನ್ನು ಸೆಳೆಯಲು ಯೋಜನೆ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

 

 

Get Latest updates on WhatsApp. Send ‘Add Me’ to 8550851559

Loading...