ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ಅಂಗೀಕಾರಗೊಂಡಿಲ್ಲ, ವೈದ್ಯರು ಪ್ರತಿಭಟನೆ ನಡೆಸುವುದು ಸರಿಯಲ್ಲ : ಸಿಎಂ – News Mirchi

ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ಅಂಗೀಕಾರಗೊಂಡಿಲ್ಲ, ವೈದ್ಯರು ಪ್ರತಿಭಟನೆ ನಡೆಸುವುದು ಸರಿಯಲ್ಲ : ಸಿಎಂ

ಬೆಂಗಳೂರು :  ವೈದ್ಯರು ಏಕಾಏಕಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ಇನ್ನೂ ಅಂಗೀಕಾರಗೊಂಡಿಲ್ಲ ಅದು  ಚರ್ಚೆಯಲ್ಲಿದೆ. ಈ ಸಂದರ್ಭದಲ್ಲಿ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಖಾಸಗಿ ವೈದ್ಯರೊಂದಿಗೆ ಅನೇಕ ಬಾರಿ ಮಾತುಕತೆ ನಡೆಸಿದ್ದೇವೆ. ಇದೀಗ ಅವರು ಏಕಾಏಕಿ 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸರ್ಕಾರ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮಕೈಗೊಂಡಿದೆ. ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರು ಹಾಜರಿರುವಂತೆ ಮತ್ತು ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸದನ ಸಮಿತಿ ತಿದ್ದುಪಡಿ ಮಸೂದೆ ಬಗ್ಗೆ ಚರ್ಚೆ ನಡೆಸಲಿದೆ. ಬಳಿಕ ವಿಧಾನಮಂಡಲದಲ್ಲಿ ಚರ್ಚೆಗೆ ಬರಲಿದೆ. ಅದಕ್ಕೂ ಮೊದಲು ವೈದ್ಯರು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಹೇಳಿದರು. ಟಿಪ್ಪು ಜಯಂತಿ ಕುರಿತು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ  ಅವರು, ಟಿಪ್ಪು ಸುಲ್ತಾನ್  ಸ್ವಾತಂತ್ರ್ಯ ಹೋರಾಟಗಾರನಾಗಿದ್ದ. ದೇಶದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೇ ಆತನ ಸಾಹಸವನ್ನು ಮೆಚ್ಚಿ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಬಿಜೆಪಿ ಯವರಿಗೆ ಇತಿಹಾಸ ಗೊತ್ತಿಲ್ಲ. ಇತಿಹಾಸ ತಿಳಿದು ಮಾತನಾಡಲಿ ಎಂದು ಹೇಳಿದರು.

 

 

Get Latest updates on WhatsApp. Send ‘Add Me’ to 8550851559

Loading...