ಬಿಜೆಪಿ ನಡೆಸುತ್ತಿರುವ ಪರಿವರ್ತನ ಯಾತ್ರೆ ಪ್ಲಾಪ್ ​ ಆಗಿದೆ : ಸಿಎಂ ಸಿದ್ದರಾಮಯ್ಯ – News Mirchi

ಬಿಜೆಪಿ ನಡೆಸುತ್ತಿರುವ ಪರಿವರ್ತನ ಯಾತ್ರೆ ಪ್ಲಾಪ್ ​ ಆಗಿದೆ : ಸಿಎಂ ಸಿದ್ದರಾಮಯ್ಯ

ಮಂಗಳೂರು : ಎಲ್ಲ ಕ್ಷೇತ್ರಗಳಲ್ಲೂ ಸಾರ್ವಜನಿಕ ಸಭೆ ನಡೆಸುತ್ತೇವೆ ಆದರೆ ಕಾಂಗ್ರೆಸ್​ನಿಂದ ಯಾವುದೇ ಯಾತ್ರೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಯಾತ್ರೆಗೆ ಜನಬೆಂಬಲವೇ ಸಿಕ್ಕಿಲ್ಲ. ಬಿಜೆಪಿ ನಡೆಸುತ್ತಿರುವ ಪರಿವರ್ತನ ಯಾತ್ರೆ ಪ್ಲಾಪ್ ​ ಆಗಿದೆ.  ಇದಕ್ಕೆ ಬಿಜೆಪಿ ನಡೆಸಿದ ಸಮಾವೇಶದಲ್ಲಿದ್ದ ಖಾಲಿ ಖುರ್ಚಿಗಳೇ ಸಾಕ್ಷಿ ಎಂದು ಸಿದ್ದರಾಮಯ್ಯ ಬಿಜೆಪಿಯ ಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಪಕ್ಷ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ರ್ಯಾಲಿ ನಡೆಸಲಿದೆ. ಎಲ್ಲಾ ಸಭೆಗಳಲ್ಲೂ ನಾನು ಭಾಗವಹಿಸುತ್ತೇನೆ  ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಇದೇ ವೇಳೆ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡುವ  ಕುರಿತು ಸರ್ಕಾರ ಚಿಂತನೆ ನಡೆಸಲಿದೆ ಎಂದರು.

 

 

 

Get Latest updates on WhatsApp. Send ‘Add Me’ to 8550851559

Loading...