ಮಾಹಿತಿ ಸಿಕ್ಕಿರೋದು ಸಾಕಾಗಿಲ್ಲ ಎಂದು ಮತ್ತಷ್ಟು ವಿಚಾರಣೆ ನಡೆಸಿದ್ದಾರೆ : ಡಿ ಕೆ ಶಿವಕುಮಾರ್

ಬೆಂಗಳೂರು :  ಮಾಹಿತಿ ಸಿಕ್ಕಿರೋದು ಸಾಕಾಗಿಲ್ಲ ಎಂದು ಮತ್ತಷ್ಟು ವಿಚಾರಣೆ ನಡೆಸಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಗೆ ಸಹಕಾರ ನೀಡುತ್ತೇನೆ ಎಂದು ಅಂದೇ ಹೇಳಿದ್ದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಐಟಿ ಅಧಿಕಾರಿಗಳ ವಿಚಾರಣೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ನ್ಯಾಯಬದ್ಧವಾಗಿ ನಡೆದುಕೊಂಡಿದ್ದೇನೆ.ಯಾವುದೇ ಮಾಹಿತಿ ಮುಚ್ಚಿಡುವುದಿಲ್ಲ. ನನ್ನ ಜೊತೆ ಅಧಿಕಾರಿಗಳು ಸೌಹಾರ್ಧವಾಗಿ ನಡೆದುಕೊಂಡಿದ್ದಾರೆ ಎಂದರು.

ಕಾನೂನನ್ನು ನಾನು ಪ್ರಶ್ನೆ ಮಾಡಲು ಹೋಗಲ್ಲ. ಮುಂದಿನ ದಿನಗಳಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ಹೇಳಿದ್ದಾರೆ. ನಮ್ಮ ಕುಟುಂಬದ ಸದಸ್ಯರು ವಿಚಾರಣೆಗೆ ಸಹಕರಿಸಿದ್ದಾರೆ. ನಾನೊಬ್ಬ ಸಾಮಾನ್ಯ ಪ್ರಜೆಯಾಗಿ ವಿಚಾರಣೆಗೆ ಹಾಜರಾಗಿದ್ದೇನೆ. ಎಲ್ಲಾ ರೀತಿಯಿಂದಲೂ ತನಿಖೆಗೆ ಸಹಕರಿಸಿದ್ದೇನೆ ಎಂದು  ತಿಳಿಸಿದರು.

 

Get Latest updates on WhatsApp. Send ‘Add Me’ to 8550851559