ಬಿಜೆಪಿ ಕಾರ್ಯಕರ್ತ ಚಿಕ್ಕತಿಮ್ಮೇಗೌಡ ಹತ್ಯೆಗೆ ನೀಡಲಾಗಿತ್ತು 1 ಕೋಟಿ ಸುಪಾರಿ

ಇತ್ತೀಚೆಗೆ ಕಾಮಾಕ್ಷಿಪಾಳ್ಯದಲ್ಲಿ ಕೊಲೆಯಾದ ಪ್ರಕರಣದಲ್ಲಿ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಕೊಲೆಗೆ ಜೆಡಿಎಸ್ ನ ಮಾಜಿ ಕಾರ್ಪೊರೇಟರ್ ಗೋವಿಂದೇಗೌಡ 1 ಕೋಟಿ ಸುಪಾರಿ ನೀಡಿರುವುದಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

ಬಿಜೆಪಿ ಸೇರಿದ್ದ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ ಕಾರಣಕ್ಕೆ ಆಕ್ರೋಶಗೊಂಡ ಮಾಜಿ ಕಾರ್ಪೊರೇಟರ್ ಗೋವಿಂದೇಗೌಡ ಚಿಕ್ಕ ತಿಮ್ಮೇಗೌಡರನ್ನು ಮಾಡಲು 1 ಕೋಟಿ ರೂಪಾಯಿ ಸುಪಾರಿ ನೀಡಿದ್ದರು ಎನ್ನಲಾಗಿದೆ.

*ಇತ್ತೀಚಿನ ಮಾಹಿತಿಗಳ ಪ್ರಕಾರ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿದ್ದು, 30 ಲಕ್ಷ ಸುಪಾರಿ ನೀಡಲಾಗಿತ್ತು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಸುಂಕದಕಟ್ಟೆ ಸಮೀಪದ ಹೆಗ್ಗನಹಳ್ಳಿ ಕ್ರಾಸ್ ನಿವಾಸಿ 42 ವರ್ಷದ ಚಿಕ್ಕತಿಮ್ಮೇಗೌಡ ರಿಯಲ್ ಎಸ್ಟೇಟ್ ಮತ್ತು ಕಟ್ಟಡ ನಿರ್ಮಾಣ ಗುತ್ತಿಗೆದಾರರಾಗಿದ್ದರು. ಸ್ನೇಹಿತನೊಂದಿಗೆ ತಮ್ಮ ಹೊಸ ಮನೆಯ ಗೃಹಪ್ರವೇಶಕ್ಕಾಗಿ ಸಾಮಾನುಗಳನ್ನು ಮನೆಯಲ್ಲಿಟ್ಟು ಬರಲು ಬೈಕಿನಲ್ಲಿ ತಿಮ್ಮೇಗೌಡ ತೆರಳಿದ್ದರು. ವಾಪಸ್ಸು ಬರುವಾಗ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಚಿಕ್ಕ ತಿಮ್ಮೇಗೌಡರನ್ನು ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಮಾಡಿದ್ದರು.

Related News

loading...
error: Content is protected !!