ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು |News Mirchi

ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಆಪ್ ಭದ್ರಕೋಟೆ ದೆಹಲಿಯ ರಾಜೌರಿ ಗಾರ್ಡನ್ ವಿಧಾನಸಭೆ ಉಪಚುನಾವಣೆಯಲ್ಲಿ ಆಮ್ ಆದ್ಮಿ‌ಪಕ್ಷ ಹೀನಾಯ ಸೋಲು ಕಂಡಿದೆ. ಆಮ್ ಆದ್ಮಿ ಪಕ್ಷದ ಶಾಸಕ ಪಂಜಾಬ್ ನಲ್ಲಿ ಸ್ಪರ್ಧಿಸಲು ರಾಜೀನಾಮೆ ನೀಡಿದ್ದರಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಈ ಉಪಚುನಾವಣೆಯಲ್ಲಿ ಪೊರಕೆ ಪಕ್ಷ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆಯಲ್ಲದೆ ಠೇವಣಿಯನ್ನೂ ಕಳೆದುಕೊಂಡಿದೆ.

ಪ್ರತಿಷ್ಠೆಯಾಗಿ ಭಾವಿಸುತ್ತಿರುವ ಮುಂಬರುವ ನಗರಸಭೆ ಚುನಾವಣೆಗಳಿಗೆ ಸೆಮಿಫೈನಲ್ ಎಂಬಂತೆ ಪರಿಗಣಿಸಿದ್ದ ಈ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಅಭ್ಯರ್ಥಿ ಮನ್‌ಜಿಂದರ್ ಸಿಂಗ್ ಸಿಸ್ರಾ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್, ಕೇವಲ 10 ಸಾವಿರ ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ 40,602 ಮತಗಳಿಸಿದ್ದಾರೆ. ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಶಿರೋಮಣಿ ಅಕಾಲಿದಳ ನಾಯಕ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧ ಸ್ಪರ್ಧಿಸಲು ದೆಹಲಿಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜರ್ನೈಲ್ ಸಿಂಗ್ ಪಂಜಾಬ್ ನಲ್ಲಿ ಪರಾಭವಗೊಂಡಿದ್ದರು.

Loading...
loading...
error: Content is protected !!