ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ – News Mirchi

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ಆಸ್ಟ್ರೇಲಿಯಾ ವಿರುದ್ಧ ಭಾರತದಲ್ಲಿ ನಡೆಯುವ ದ್ವಿಪಕ್ಷೀಯ ಕ್ರಿಕೆಟ್ ಸರಣಿಯ ಮೊದಲ ಮೂರು ಏಕದಿನ ಪಂದ್ಯಗಳಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ಆಯ್ಕೆ ಸಮಿತಿ ಭಾನುವಾರ ತಂಡದ ಆಯ್ಕೆ ಮಾಡಿದೆ. ಆಯ್ಕೆಯಾದ ತಂಡದಲ್ಲಿ ಇದರಲ್ಲಿ ಬಹುತೇಕ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆಡಿದ ತಂಡವನ್ನೇ ಆಯ್ಕೆ ಮಾಡಲಾಗಿದೆ. ಆದರೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಶಾರ್ದೂಲ್ ಠಾಕೂರ್ ಗೆ ಮಾತ್ರ ನಿರಾಸೆಯಾಗಿದೆ. 16 ಸದಸ್ಯರ ತಂಡದಲ್ಲಿ ಶಾರ್ದೂಲ್ ಗೆ ಸ್ಥಾನ ಸಿಕ್ಕಿಲ್ಲ.

ಇನ್ನು ಶ್ರೀಲಂಕಾ ವಿರುದ್ಧದ ಸರಣಿಯಿಂದ ದೂರವಿದ್ದ ಉಮೇಶ್ ಯಾದವ್, ಮೊಹಮದ್ ಶಮಿ ಅವರಿಗೆ ಪುನಃ ಅವಕಾಶ ಸಿಕ್ಕಿದೆ. ಮತ್ತೊಂದು ಕಡೆ ಇಂಗ್ಲೀಷ್ ಕೌಂಟಿಗಳಲ್ಲಿ ಆಡುತ್ತಿರುವ ಕಾರಣದಿಂದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆಯಲ್ಲಿ ಪರಿಗಣಿಸಲಿಲ್ಲ. ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಅಶ್ವಿನ್ ಗೆ ವಿಶ್ರಾಂತಿ ನೀಡಿ ಆಯ್ಕೆದಾರರು ತೀರ್ಮಾನ ಕೈಗೊಂಡಿದ್ದಾರೆ. ಅಶ್ವಿನ್ ಜೊತೆ ಮತ್ತೊಬ್ಬ ಸ್ಪಿನ್ನರ್ ರವೀಂದ್ರ ಜಡೇಜಾಗೂ ವಿಶ್ರಾಂತಿ ನೀಡಲಾಗಿದೆ. ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಮತ್ತೊಮ್ಮೆ ದೂರವಿಡಲಾಗಿದೆ.

ಸೆಪ್ಟೆಂಬರ್ 17 ರಂದು ಚೆನ್ನೈನ್ಲಲಿನ ಚೆಪಾಲ್ ಸ್ಟೇಡಿಯಂ ನಲ್ಲಿ ನಡೆಯುವ ಮೊದಲ ಏಕದಿನ ಪಂದ್ಯದ ಮೂಲಕ ಸರಣಿ ಆರಂಭವಾಗುತ್ತದೆ. ಆಸ್ಟ್ರೇಲಿಯಾ ತನ್ನ ಪ್ರವಾಸದಲ್ಲಿ ಐದು ಏಕದಿನ ಪಂದ್ಯಗಳು, ಮೂರು ಟಿ20 ಪಂದ್ಯಗಳನ್ನು ಆಡಲಿದೆ.

ಮೊದಲ ಮೂರು ಏಕದಿನ ಪಂದ್ಯಗಳಿಗೆ ಪ್ರಕಟವಾದ ಭಾರತ ತಂಡ
ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್.ರಾಹುಲ್, ಮನೀಶ್ ಪಾಂಡೆ, ಕೇದಾರ್ ಜಾಧವ್, ಅಜಿಂಕ್ಯ ರೆಹಾನೆ, ಎಂ.ಎಸ್.ಧೋನಿ, ಹಾರ್ಧಿಕ್ ಪಾಂಡ್ಯಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಚಹಾಲ್, ಬೂಮ್ರಾ, ಭುವನೇಶ್ವರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ

Click for More Interesting News

Loading...
error: Content is protected !!