ತ್ರಾಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ |News Mirchi

ತ್ರಾಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮೂ ಕಾಶ್ಮೀರ: ಭಾರತದ ಭದ್ರತಾಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಮ್ಮೂ ಕಾಶ್ಮೀರದ ಸತೋರಾ ಅರಣ್ಯ ಪ್ರದೇಶ ತ್ರಾಲ್ ನಲ್ಲಿ ಉಗ್ರಿರುವ ಮಾಹಿತಿ ಭದ್ರತಾ ಪಡೆಗಳಿಗೆ ಲಭಿಸಿತ್ತು. ಭದ್ರತಾ ಪಡೆಗಳು ಉಗ್ರರಿಗಾಗಿ ಶೋಧ ಕಾರ್ಯಚರಣೆ ಕೈಗೊಂಡಿದ್ದರು. ಈ ವೇಳೆ ಸೈನಿಕರ ಮೇಲೆ ಉಗ್ರರು ಗುಂಡು ಹಾರಿಸಲು ಮುಂದಾದಾಗ, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಂದಿವೆ.

ಉಗ್ರರ ಮೃತದೇಹಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಉಗ್ರರ ವಿರುದ್ಧ ಕಾರ್ಯಚರಣೆ ಮುಂದುವರೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

  • No items.

ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಬುರ್ಹಾನ್ ವಾನಿ ಸ್ಮರಣಾರ್ಥ ಉಗ್ರರು ಮತ್ತಷ್ಟು ದಾಳಿಗಳು ನಡೆಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಜಮ್ಮೂ ಕಾಶ್ಮೀರದಲ್ಲಿ ಅಮರನಾಥ ಯಾತ್ರಿಗಳ ಬಸ್ ಮೇಲೆ ದಾಳಿ ನಡೆಸಿದ ಉಗ್ರರು, 7 ಭಕ್ತರ ಸಾವಿಗೆ ಕಾರಣರಾಗಿದ್ದರು.

Loading...
loading...
error: Content is protected !!