ಬಿಜೆಪಿ 20 ಮತ್ತು ಕೆಲ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ: ಪರಮೇಶ್ವರ್ – News Mirchi

ಬಿಜೆಪಿ 20 ಮತ್ತು ಕೆಲ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ: ಪರಮೇಶ್ವರ್

ಮುಂದಿನ ದಿನಗಳಲ್ಲಿ ಬಿಜೆಪಿಯಿಂದ 20 ಮತ್ತು ಜೆಡಿಎಸ್ ನಿಂದ ಕೆಲ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಉಪಚುನಾವಣೆ ನಡೆಯಲಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿದ್ದರು, ಅವರಿಗೆ ಸ್ವಲ್ಪ ದಿನ ಕಾಯೋಣ ಎಂದು ಹೇಳಿದ್ದೇನೆ ಎಂದು ಪರಮೇಶ್ವರ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ಪಕ್ಷದ, ಯಾವ ನಾಯಕರು ಕಾಂಗ್ರೆಸ್‌ ಸೇರಲಿದ್ದಾರೆ ಎಂಬುದನ್ನು ಜನರಿಗೆ ತಿಳಿಸುತ್ತೇನೆ ಎಂದರು.

ಜೆಡಿಎಸ್ ನಿಂದ ಅಮಾನತುಗೊಂಡ ಕೆಲ ಶಾಸಕರೂ ತಮ್ಮನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ಚರ್ಚಿಸಿದ್ದು, ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿರುವುದಾಗಿ ಹೇಳಿದರು.

Loading...

Leave a Reply

Your email address will not be published.