ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ

 

Get Latest updates on WhatsApp. Send ‘Add Me’ to 8550851559

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್  ಬೆಂಗಳೂರಿಗೆ ಆಗಮಿಸುತ್ತಿದ್ದು, ವಜ್ರಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಾರೆ. ವಿಧಾನಸೌಧ ವಜ್ರಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ನವವಧುವಿನಂತೆ ಸಿಂಗಾರಗೊಂಡಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಅಶ್ವಾರೂಢ ಪಡೆ ವಿಶೇಷ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಮೆಯಿಂದ ವಿಧಾನಸಭೆ ಸ್ಪೀಕರ್ ಆಸನದವರೆಗೆ ಸ್ಪೀಕರ್ ಕೆ.ಬಿ.ಕೋಳಿವಾಡ, ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ರಾಷ್ಟ್ರಪತಿಗಳೊಂದಿಗೆ ಹೆಜ್ಜೆ ಹಾಕಲಿದ್ದಾರೆ. ರಾಷ್ಟ್ರಪತಿಗಳು ವಿಧಾನಸಭೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ವಿಧಾನಪರಿಷತ್ ಸಭಾಂಗಣಕ್ಕೂ ಭೇಟಿ ನೀಡಲಿದ್ದಾರೆ.