ನನ್ನ ನೇತೃತ್ವದಲ್ಲಿಯೇ ವಿಧಾನ ಸಭಾ ಚುನಾವಣೆ : ಸಿಎಂ ಸಿದ್ದರಾಮಯ್ಯ – News Mirchi

ನನ್ನ ನೇತೃತ್ವದಲ್ಲಿಯೇ ವಿಧಾನ ಸಭಾ ಚುನಾವಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯಲಿದ್ದು, ಹೈಕಮಾಂಡ್ ಕೂಡ ಈ ಕುರಿತು ಪತ್ರ ಬರೆದು ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಜಿಜ್ಞಾಸೆಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಪತ್ರ ಬರೆದಿದ್ದು ಈ ವಿಚಾರದಲ್ಲಿ ಯಾರಿಗೂ ಗೊಂದಲ ಬೇಡ ಎಂದರು. ಮೀಡಿಯಾದವರು ಯಾಕೆ ಪದೇ ಪದೇ ಇದೇ ಪ್ರಶ್ನೆ ಕೇಳುತ್ತಿದ್ದೀರಿ, ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೂ ಇಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ, ಚುನಾವಣೆಯಲ್ಲಿ ನೇತೃತ್ವ ನನ್ನದೇ ಎಂದರು. ಹೈಕಮಾಂಡ್ ಹಾಗೂ ನೂತನ ಶಾಸಕರು ಮುಂದಿನ ಮುಖ್ಯಮಂತ್ರಿ ಯಾರು ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ 100ಕ್ಕೆ 100 ಗೆಲ್ಲುವುದು ನಾವೇ , ಇದರಲ್ಲಿ ಅನುಮಾನವೇ ಬೇಡ ಎಂದು ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಎಷ್ಟೇ ಹಣ ಖರ್ಚು ಮಾಡಿದರೂ ಸೋಲಿಸಲಾಗುವುದು ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೇಟು ನೀಡಿದ ಅವರು ಕ್ಷೇತ್ರದಲ್ಲಿನ ಎರಡು ಸಾವಿರ ಮತದಾರರು ಕುಮಾರಸ್ವಾಮಿಯವರ ಜೇಬಿನಲ್ಲಿದ್ದಾರಾ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲು ಗೆಲುವನ್ನು ತೀರ್ಮಾನ ಮಾಡಲು ಬರುವುದಿಲ್ಲ. ಅಲ್ಲಿನ ಮತದಾರರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

Get Latest updates on WhatsApp. Send ‘Add Me’ to 8550851559

Loading...