ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ – News Mirchi

ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು :  2017-18ನೇ ಸಾಲಿನ ಎಸ್.ಎಸ್.ಎಲ್.ಸಿ.ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2018ರ ಮಾರ್ಚ್ 23ರಿಂದ ಏಪ್ರೀಲ್ 4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ ಎಸ್.ಎಸ್ಎಲ್ ಸಿ ಹಾಗೂ ಪಿಯುಸಿ ವೇಳಾ ಪಟ್ಟಿ ಬದಲಾವಣೆ ಮಾಡಲಾಗಿದ್ದು, ಏಪ್ರೀಲ್ 30ರೊಳಗೆ ಫಲಿತಾಂಶ ಪ್ರಕಟಿಸಲು ತೀರ್ಮಾನಿಸಲಾಗಿದೆ. ಈಬಾರಿ 9.60ಲಕ್ಷ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದು , ಮೌಲ್ಯಮಾಪನ ಪ್ರಕ್ರಿಯೆಗೆ 60ಸಾವಿರ ಶಿಕ್ಷಕರ ಅಗತ್ಯವಿದೆ. 7 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು ವೇಳಾಪಟ್ಟಿ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 24ರೊಳಗೆ ಕರ್ನಾಟಕ ಪ್ರೌಢಶಿಕ್ಷಣಾ ಪರೀಕ್ಷಾ ಮಂಡಳಿಗೆ ಅಂಚೆ ಮೂಲಕ ಕಳುಹಿಸಬಹುದು. ಆಕ್ಷೇಪಣೆಗಳಿದ್ದಲ್ಲಿ ಅಂತಿಮ ವೇಳಾಪಟ್ಟಿ ಮತ್ತೆ ಪ್ರಕಟಿಸಲಾಗುವುದು ಎಂದು ತಿಳಿಸಿದರು.

 

 

Get Latest updates on WhatsApp. Send ‘Add Me’ to 8550851559

Loading...