ಬಾಂದ್ರಾದ ರೈಲ್ವೆ ನಿಲ್ದಾಣದಲ್ಲಿ ಭಾರೀ ಅಗ್ನಿ ಅನಾಹುತ – News Mirchi

ಬಾಂದ್ರಾದ ರೈಲ್ವೆ ನಿಲ್ದಾಣದಲ್ಲಿ ಭಾರೀ ಅಗ್ನಿ ಅನಾಹುತ

ಮುಂಬೈ :  ಇಲ್ಲಿನ ಬಾಂದ್ರಾದ ರೈಲ್ವೆ ನಿಲ್ದಾಣದಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದರಿಂದ ಹಿರಿಯ ರೈಲ್ವೆ ಅಧಿಕಾರಿಗಳು ರೈಲು ಸೇವೆಗಳನ್ನು ನಿಲ್ಲಿಸುವಂತೆ ತಿಳಿಸಿದ್ದಾರೆ. 16 ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅನಾಹುತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿಗಳು ತಿಳಿಸಿದ್ದಾರೆ. ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ.

 

 

 

 

Get Latest updates on WhatsApp. Send ‘Add Me’ to 8550851559

Loading...