ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ – News Mirchi

ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ

ಬೆಂಗಳೂರು : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನವೆಂಬರ್ 19ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ಅವರ ಈ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅ.29ರಂದು ನಿಗದಿಯಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸಾನಕ್ಕೆ ಈ ಸಭೆಯಲ್ಲಿ ರಾಹುಲ್ ಹೆಸರು ಅಂತಿಮಗೊಳ್ಳಬಹುದು. ಇಂದಿರಾ ಗಾಂಧಿಯವರ ಜನ್ಮದಿನವಾದ ನವೆಂಬರ್ 19ರಂದು ರಾಹುಲ್ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ನ.19ಕ್ಕೆ ಚಿಕ್ಕಮಗಳೂರು, ನ.20.ಶಿವಮೊಗ್ಗ, ನ.21ರಂದು ಕುಮಟಾದಲ್ಲಿ ನಡೆಯುವ ಸಮಾವೇಶಗಳಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುವವರಿದ್ದರು. ಆದರೆ ಅವರ ರಾಜ್ಯ ಪ್ರವಾಸ ಮುಂದೂಡಲಾಗಿದೆ.

Get Latest updates on WhatsApp. Send ‘Add Me’ to 8550851559

Loading...