ಚಿತ್ರ ಕೃಪೆ: ಪಬ್ಲಿಕ್ ಟಿವಿ

ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಕಿರುಕುಳ ನೀಡಿದ ಪತಿಯ ಬಂಧನ

ಬೆಳಗಾವಿ: ಪತ್ನಿಯನ್ನು ನಾಯಿ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಪೀಡಿಸುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.

ಎರಡು ಮಕ್ಕಳ ತಂದೆಯಾಗಿರುವ ಸಂಜೀವ ಭಾಗೋಜಿ, ಕಳೆದ ಕೆಲ ತಿಂಗಳಿಂದ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ಭಾನುವಾರ ನಾಯಿಯೊಂದಿಗೆ ಅಸಹ ಲೈಂಗಿಕ ಕ್ರಿಯೆ ನಡೆಸುವಂತೆ ಪೀಡಿಸಿದ್ದಾನೆ ಎನ್ನಲಾಗಿದೆ. ಆದರೆ ಇದಕ್ಕೆ ಒಪ್ಪದ ಆಕೆಯನ್ನು ಮಕ್ಕಳ ಸಮೇತ ಹೊರಹಾಕಿದ್ದಾನೆ ಎನ್ನಲಾಗಿದೆ. ಪತಿಯ ಕಿರುಕುಳ ತಾಳಲಾರದೆ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದು, ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸದ್ಯ ಆಕೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Loading...

Leave a Reply

Your email address will not be published.

error: Content is protected !!