ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ : ಜಾರ್ಜ್ ರಾಜೀನಾಮೆಯ ಅಗತ್ಯವಿಲ್ಲ ಸಿಎಂ – News Mirchi

ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ : ಜಾರ್ಜ್ ರಾಜೀನಾಮೆಯ ಅಗತ್ಯವಿಲ್ಲ ಸಿಎಂ

ಬೆಂಗಳೂರು :  ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ   ಬೆಂಗಳೂರು  ನಗರಾಭಿವೃದ್ಧಿ  ಸಚಿವ ಕೆ.ಜೆ ಜಾರ್ಜ್‌ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ್ದು, ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ಹಿರಿಯ ಸಚಿವರು ಹಾಗೂ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲೂ ಸಚಿವ ಜಾರ್ಜ್ ರಾಜೀನಾಮೆ ಪಡೆಯುವ ಅಗತ್ಯವಿಲ್ಲ ಎಂಬ ಮಾತು ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಸುಪ್ರೀಂಕೋರ್ಟಿನ ಆದೇಶದಲ್ಲಿ ಜಾರ್ಜ್‌ ಹೆಸರು ಪ್ರಸ್ತಾಪ ಆಗಿಲ್ಲ. ಜೊತೆಗೆ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸಿಐಡಿಯ ಬಿ ರಿಪೋರ್ಟ್ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಹಾಗಾಗಿ, ಜಾರ್ಜ್ ರಾಜೀನಾಮೆ ಅಗತ್ಯವಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದರು. ಬಿಜೆಪಿ ರಾಜಕೀಯ ಲಾಭ ಪಡೆಯಲು ರಾಜ್ಯದ ಕಾಂಗ್ರೆಸ್ ವರ್ಚಸ್ ನ್ನು ಹಾಳು ಮಾಡಲು ಈ ವಿಚಾರವನ್ನು ರಾಜಕೀಯಗೊಳಿಸುತ್ತಿದೆ. ಬಿಜೆಪಿಯ ಪ್ರಯತ್ನ ವಿಫಲವಾಗಲಿದೆ ಎಂದರು. ಸಿಓಡಿ ತನಿಖೆ ಸಂದರ್ಭದಲ್ಲಿ ಸಚಿವ ಜಾರ್ಜ್ ಸಚಿವ ಹುದ್ದೆಯಲ್ಲಿದ್ದರೆ ಪ್ರಭಾವ ಬೀರುತ್ತಾರೆ ಎಂಬ ಕಾರಣಕ್ಕೆ ರಾಜೀನಾಮೆ ಪಡೆಯಲಾಗಿತ್ತು. ಈಗ ಜಾರ್ಜ್ ಪ್ರಭಾವ ಬೀರಲು ಸಾಧ್ಯವೇ ಇಲ್ಲ. ಹಾಗಾಗಿ, ಅವರ ರಾಜೀನಾಮೆ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಸಿಬಿಐನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದ ಅವರು, ಸಚಿವ ಜಾರ್ಜ್‌ರವರ ಹೆಸರು ಕೆಡಿಸಲು ಬಿಜೆಪಿ ರಾಜಕಾರಣ ನಡೆಸಿದೆ ಎಂದು ಹರಿಹಾಯ್ದರು. ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಎಫ್‌ಐಆರ್ ದಾಖಲಿಸಿರುವ ಸಚಿವರು ಇದ್ದಾರೆ. 8 ಕೇಂದ್ರ ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯ ಯೋಗಿನಾಥ್ ವಿರುದ್ಧವೂ ಪ್ರಕರಣ ಇದೆ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲವೇ ಎಂದು  ತಿರುಗೇಟು ನೀಡಿದರು.

 

 

Get Latest updates on WhatsApp. Send ‘Add Me’ to 8550851559

Loading...