ಸರ್ಕಾರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲದಿದ್ದಲ್ಲಿ  ನ. 10 ರಿಂದ ರಾಜ್ಯಾದ್ಯಂತ ಲಾರಿ ಮುಷ್ಕರದ ಎಚ್ಚರಿಕೆ – News Mirchi

ಸರ್ಕಾರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲದಿದ್ದಲ್ಲಿ  ನ. 10 ರಿಂದ ರಾಜ್ಯಾದ್ಯಂತ ಲಾರಿ ಮುಷ್ಕರದ ಎಚ್ಚರಿಕೆ

ಬೆಂಗಳೂರು :  ಸರ್ಕಾರ ಕೂಡಲೇ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲದಿದ್ದಲ್ಲಿ  ನ. 10 ರಿಂದ ರಾಜ್ಯಾದ್ಯಂತ ಸರಕು ಸಾಗಾಣೆ ವಾಹನಗಳ ಓಡಾಟ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರದ ಎಚ್ಚರಿಕೆಯನ್ನು  ಸಂಘದ ಅಧ್ಯಕ್ಷ ಬಿ. ಚನ್ನಾರೆಡ್ಡಿ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸರ್ಕಾರ ವಾಹನಗಳಿಗೆ ವಿಧಿಸುವ ಶುಲ್ಕವನ್ನು ಮೂರು ಪಟ್ಟು ಹೆಚ್ಚಳ ಮಾಡಿರುವುದನ್ನು ಕಡಿಮೆ ಮಾಡುವಂತೆ ಸಲ್ಲಿಸಿದ ಮನವಿಗೆ ನಿರ್ಲಕ್ಷ್ಯ ತೋರಿದೆ. ಅದರಿಂದ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ ಎಂದರು. ಕೇಂದ್ರ ಸರ್ಕಾರದ ಅಧಿಸೂಚನೆಯ ಮೇರೆಗೆ ರಾಜ್ಯ ಸರ್ಕಾರ ಭಾರೀ ವಾಹನಗಳಿಗೆ 80ಕಿ.ಮೀ.ವೇಗಕ್ಕಿಂತ ಹೆಚ್ಚು ವೇಗ ಹೋಗದಂತೆ ವೇಗ ನಿಯಂತ್ರಕ ಅಳವಡಿಸಲು ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರ ನಿರ್ದಿಷ್ಟ ಕಂಪನಿ ತಯಾರು ಮಾಡಿದ ವೇಗ ನಿಯಂತ್ರಕ ಸಾಧನಗಳನ್ನು ಅಳವಡಿಸಲು ಸೂಚಿಸಿರುವುದರಿಂದ ಲಾರಿ ಮಾಲೀಕರು ಅಗತ್ಯಕ್ಕಿಂತಲೂ ಹೆಚ್ಚು ಹಣ ವ್ಯಯಿಸಬೇಕಾಗಿದೆ. ಇದನ್ನು ಸರಿಪಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದರು.

ಅವೈಜ್ಞಾನಿಕ ಟೋಲ್ ವಸೂಲಿ ರಾಜ್ಯ ಹೆದ್ದಾರಿಗಳಲ್ಲಿ ನಡೆಯುತ್ತಿದ್ದು ಅದನ್ನು ಸ್ಥಗಿತಗೊಳಿಸಬೇಕು. ಹಳೆ ಲಾರಿ ಮಾಲೀಕರಿಗೆ ನೂತನವಾಗಿ ಜಾರಿ ಮಾಡಿರುವ ಫಿಟ್ನೆಸ್ ಸರ್ಟಿಫಿಕೇಟ್ ವಿತರಣೆಯಿಂದ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸಬೇಕೆಂದು ಒತ್ತಾಯಿಸಿದರು. ನಮ್ಮ ಬೇಡಿಕೆ ನ.10ರೊಳಗೆ ಈಡೇರಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅನಿವಾರ್ಯ ಎಂದು ತಿಳಿಸಿದರು.

 

 

 

Get Latest updates on WhatsApp. Send ‘Add Me’ to 8550851559

Loading...