ಪೊಲೀಸ್ ಇಲಾಖೆಯ ಸಿಬ್ಬಂದಿ ಕೊರತೆ ಗಂಭೀರವಾಗಿ ಪರಿಗಣಿಸಿ 24 ಸಾವಿರ ಸಿಬ್ಬಂದಿಗಳ ನೇಮಕ : ರಾಮಲಿಂಗಾರೆಡ್ಡಿ – News Mirchi

ಪೊಲೀಸ್ ಇಲಾಖೆಯ ಸಿಬ್ಬಂದಿ ಕೊರತೆ ಗಂಭೀರವಾಗಿ ಪರಿಗಣಿಸಿ 24 ಸಾವಿರ ಸಿಬ್ಬಂದಿಗಳ ನೇಮಕ : ರಾಮಲಿಂಗಾರೆಡ್ಡಿ

ಬೆಂಗಳೂರು :  ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿ ಹೊಸದಾಗಿ ಇಲ್ಲಿವರೆಗೆ 24 ಸಾವಿರ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲಾಗಿದೆ. ನೇಮಕಾತಿ ಪ್ರಕಿಯೆ ನಿರಂತರವಾಗಿ ನಡೆಯುತ್ತಿದ್ದು ಕೆಲವೇ ವರ್ಷಗಳಲ್ಲಿ ಸಿಬ್ಬಂದಿಯ ಕೊರತೆ ನಿವಾರಣೆಯಾಗಲಿದೆ  ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಉಲ್ಲಾಳದಲ್ಲಿ ಸಿಎಆರ್(ಪಶ್ಚಿಮ) ಘಟಕದ ವಿವಿಧ ಕಟ್ಟಡಗಳ ಸಮುಚ್ಛಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ರಾಜ್ಯದ ಪೊಲೀಸರಿಗೆ ವಸತಿ ಸಮಸ್ಯೆಯನ್ನು ನೀಗಿಸಲು ಸೂಕ್ತ ಸೌಲಭ್ಯ ಒದಗಿಸಲು 11 ಸಾವಿರ ವಸತಿಗೃಹಗಳನ್ನು ನಿರ್ಮಿಸಲಾಗಿದೆ. 11 ಸಾವಿರ ವಸತಿಗೃಹಗಳನ್ನು ನಿರ್ಮಾಣ ಮಾಡಿದ್ದರೂ ಇನ್ನು ರಾಜ್ಯದ ಶೇ. 50 ರಷ್ಟು ಮಂದಿ ಪೊಲೀಸರಿಗೆ ವಸತಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿಲ್ಲ ಎಂದರು.

ಹಿಂದಿನ ಸರ್ಕಾರಗಳು  ಪೊಲೀಸರಿಗೆ ವಸತಿಗೃಹಗಳನ್ನು ನಿರ್ಮಿಸಿಕೊಡುವಲ್ಲಿ ತೋರಿರುವ ನಿರ್ಲಕ್ಷ್ಯದಿಂದಾಗಿ ಹೆಚ್ಚು ಮಂದಿ ಪೊಲೀಸರು ವಸತಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದನ್ನು ನಿವಾರಿಸಲು ಆದ್ಯತೆ ನೀಡಿರುವ ಸರ್ಕಾರ, ಕಳೆದ ನಾಲ್ಕೂವರೆ ವರ್ಷಗಳಲ್ಲಿ 11 ಸಾವಿರ ಮನೆಗಳನ್ನು ನಿರ್ಮಾಣ ಮಾಡಿದ್ದು, ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸರಿಗೆ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುವುದು ಇಲಾಖೆ ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

 

 

 

Get Latest updates on WhatsApp. Send ‘Add Me’ to 8550851559

Loading...