ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಕಳೆದ ವರ್ಷಕ್ಕಿಂತ ಒಂದು ವಾರ ಮುಂಚಿತವಾಗಿ ನಡೆಸಲಾಗುತ್ತಿದೆ : ತನ್ವೀರ್ ಸೇಠ್ – News Mirchi

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಕಳೆದ ವರ್ಷಕ್ಕಿಂತ ಒಂದು ವಾರ ಮುಂಚಿತವಾಗಿ ನಡೆಸಲಾಗುತ್ತಿದೆ : ತನ್ವೀರ್ ಸೇಠ್

ರಾಯಚೂರು :  ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಕಳೆದ ವರ್ಷಕ್ಕಿಂತ ಒಂದು ವಾರ ಮುಂಚಿತವಾಗಿ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೋಧನಾ ಅವಧಿ ಹೆಚ್ಚಾಗಿರುವುದರಿಂದ ಸಿಲೆಬಸ್ ಮುಗಿಸಲು ಸಮಸ್ಯೆಯಾಗುವುದಿಲ್ಲ. ಈಗ ಕರಡು ಪ್ರಕಟಣೆ ಹೊರಡಿಸಲಾಗಿದ್ದು, ಪಾಲಕರು ಸಲಹೆ ನೀಡಿದರೆ ಪರಿಶೀಲಿಸಲಾಗುವುದು ಎಂದರು.

ಶಾಲಾ ಗೋಡೆಗಳಲ್ಲಿ ಶಿಕ್ಷಕರ ಭಾವಚಿತ್ರ, ಮಾಹಿತಿ ದಾಖಲಿಸಬೇಕು ಎನ್ನುವುದು ಕೇಂದ್ರ ಸರ್ಕಾರದ ನಿರ್ಧಾರ ಸರಿಯಲ್ಲ ಎನ್ನುವುದು ನನ್ನ ಅಭಿಪ್ರಾಯ. ಮುಖ್ಯಗುರುಗಳ ಹತ್ತಿರ ಮಾಹಿತಿ ಇಟ್ಟುಕೊಳ್ಳುವಂತೆ ತಿಳಿಸಲಾಗಿದೆ. ಶಾಲೆ ಗೋಡೆ ಮೇಲೆ ಮಾಹಿತಿ ಹಾಕಲ್ಲ ಎಂದು ತಿಳಿಸಿದರು. ಸಚಿವ ಕೆ.ಜೆ.ಜಾಜ್೯ ರಾಜೀನಾಮೆ ಕುರಿತ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್ ನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಜಾರ್ಜ್ ರಾಜೀನಾಮೆ ಕೇಳುವ ನೈತಿಕತೆ ಇಲ್ಲ.  ಸಿಬಿಐ ತನಿಖೆಗೆ   ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

 

 

 

 

 

Get Latest updates on WhatsApp. Send ‘Add Me’ to 8550851559

Loading...