ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ – News Mirchi

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ

ನವದೆಹಲಿ :  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣದಿಂದ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಗುಣಮುಖರಾಗಿದ್ದಾರೆ.

ಸೋನಿಯಾಗಾಂಧಿ ಅವರು ಹೊಟ್ಟೆನೋವಿನಿಂದ ಬಳಲುತ್ತಿದ್ದು ಶುಕ್ರವಾರ ಕಾರಣದಿಂದ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.  ಇದೀಗ ಚೇತರಿಸಿಕೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವೈದ್ಯರು ಸೋನಿಯಾ ಅವರಿಗೆ ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ಅವರು ಹೊಟ್ಟೆಯ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿ ಡಾ.ಡಿ.ಎಸ್.ರಾಣಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಶಿಮ್ಲಾದಲ್ಲಿ ನ.9ಕ್ಕೆ ಚುನಾವಣೆ ನಡೆಯಲಿದ್ದು, ಸೋನಿಯಾ ಗಾಂಧಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಅನಾರೋಗ್ಯದಿಂದ ದೆಹಲಿಗೆ ಹಿಂದಿರುಗಿದ್ದರು ಎನ್ನಲಾಗಿದೆ.

 

 

 

Get Latest updates on WhatsApp. Send ‘Add Me’ to 8550851559

Loading...