ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಂಸ್ಟೇ ಮೇಲೆ ದಾಳಿ : ಏಳು ಮಂದಿ ಪೊಲೀಸ್ ವಶಕ್ಕೆ – News Mirchi

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಂಸ್ಟೇ ಮೇಲೆ ದಾಳಿ : ಏಳು ಮಂದಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ಹೋಂಸ್ಟೇ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಮಹಿಳೆಯರು ಮತ್ತು ಪುರುಷರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಉಳುವಾಗಿಲು ಗ್ರಾಮದಲ್ಲಿನ ಹೋಂಸ್ಟೇ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಐವರು ಮಹಿಳೆಯರು ಇಬ್ಬರು ಪುರುಷರು ಸೇರಿದಂತೆ ಏಳು ಮಂದಿಯನ್ನು  ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಐವರು ಮಹಿಳೆಯರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಎನ್ನಲಾಗಿದ್ದು, ಅವರ ಮೇಲೆ ಕೇಸ್ ದಾಖಲಿಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.  ಮಲ್ಲಂದೂರು ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ  ಪ್ರವಾಸೋದ್ಯಮ ಬೆಳೆಯುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯೂ ಹೆಚ್ಚುತ್ತಿದ್ದು, ಹೋಂ ಸ್ಟೇ ಗಳು ತಲೆ ಎತ್ತುತ್ತಿವೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೋಂಸ್ಟೇ ಗಳಿದ್ದು ಕೆಲವು ನೋಂದಣಿಯಾಗಿವೆ,ಕೆಲವು ನೋಂದಣಿಯಾಗಿಲ್ಲ ಎನ್ನಲಾಗುತ್ತಿದೆ. ಸಂಬಂಧಪಟ್ಟವರು ಇತ್ತ ಗಮನ ಹರಿಸಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಕ್ರಮವಹಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

 

 

 

 

Get Latest updates on WhatsApp. Send ‘Add Me’ to 8550851559

Loading...