ಕರ್ನಾಟಕದಲ್ಲಿ ಅಭಿವೃದ್ಧಿ ಯಾರು ಮಾಡಿದ್ದಾರೆ ಎಂದು ಜನರಿಗೆ ಗೊತ್ತಿದೆ : ಸಿಎಂ ವ್ಯಂಗ್ಯ – News Mirchi

ಕರ್ನಾಟಕದಲ್ಲಿ ಅಭಿವೃದ್ಧಿ ಯಾರು ಮಾಡಿದ್ದಾರೆ ಎಂದು ಜನರಿಗೆ ಗೊತ್ತಿದೆ : ಸಿಎಂ ವ್ಯಂಗ್ಯ

ಮೈಸೂರು : ನಾನು ಮೋದಿ ಭಾಷಣ ಕೇಳಿಲ್ಲ. ಕರ್ನಾಟಕದಲ್ಲಿ ಅಭಿವೃದ್ಧಿ ಯಾರು ಮಾಡಿದ್ದಾರೆ ಎಂದು ಜನರಿಗೆ ಗೊತ್ತಿದೆ ಎಂದು ಪ್ರಧಾನಿ ಮೋದಿಯ ಕುರಿತು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಮಾಧ್ಯಮಪ್ರತಿನಿಧಿಗ ಪ್ರಶ್ನೆಗೆ ಪ್ರತಿಕ್ರಿಯಿಸಿ ಕೇಂದ್ರ ಹೇಳಿದ ಯಾವುದೇ ಕೆಲಸ ಮಾಡಿಲ್ಲ. ಅವರ ನೋಟು ಅಮಾನ್ಯೀಕರಣದಿಂದ ಬಡವರಿಗೆ ಹಾಗೂ ಜನಸಾಮಾನ್ಯರಿಗೆ ಯಾವುದೇ ಉಪಯೋಗ ಆಗಿಲ್ಲ. ಕರ್ನಾಟಕದಲ್ಲಿ ಅಭಿವೃದ್ದಿ ಆಗಿದ್ದರೆ ಅದು ನಾವು ಮಾಡಿದ್ದು. ಕಾಂಗ್ರೆಸ್‌ ಸ್ವಾತಂತ್ರ್ಯ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಇದ್ದಕ್ಕಿದ್ದಂತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪಕ್ಷಕ್ಕೆ ಯಾವುದೇ ಸಿದ್ದಾಂತ ಇಲ್ಲ. ಭಾರತವನ್ನು ಹಿಂದೂರಾಷ್ಟ್ರ ಮಾಡುತ್ತೇವೆ ಅನ್ನೋದು ಸಿದ್ದಾಂತ ಅಲ್ಲ. ಅದು ಸಂವಿಧಾನದ ವಿರೋಧಿ ಧೋರಣೆಯಾಗಿದೆ ಎಂದರು.

Get Latest updates on WhatsApp. Send ‘Add Me’ to 8550851559

Loading...