ಉಗ್ರರ ವಿರುದ್ಧ ಕಾರ್ಯಾಚರಣೆ : ಓರ್ವನನ್ನು ಹೊಡೆದುರುಳಿಸಿದ ಸೇನಾ ಪಡೆ – News Mirchi

ಉಗ್ರರ ವಿರುದ್ಧ ಕಾರ್ಯಾಚರಣೆ : ಓರ್ವನನ್ನು ಹೊಡೆದುರುಳಿಸಿದ ಸೇನಾ ಪಡೆ

ಶ್ರೀನಗರ : ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಂಡಿಪೋರ್ ಸಮೀಪದ ಹಜೀನ್ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಓರ್ವ ಉಗ್ರನನ್ನು ಸೇನಾಪಡೆ ಹೊಡೆದುರುಳಿಸಿದೆ.

ಸೇನಾ ಪಡೆ ಉಗ್ರರು ಹಜೀನ್ ಪ್ರದೇಶದಲ್ಲಿ ಟಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಸ್ಥಳೀಯ ಪೊಲೀಸರ ನೆರವಿನಿಂದ ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರು ಸೇನಾಪಡೆಯ ಮೇಲೆ ಪ್ರತಿದಾಳಿ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಸೇನಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದೆ ಎಂದು ಸೇನಾ ವಕ್ತಾರರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

 

 

 

 

Get Latest updates on WhatsApp. Send ‘Add Me’ to 8550851559

Loading...