ಅಮರನಾಥ ಯಾತ್ರಿಗಳ ಮೇಲಿನ ದಾಳಿಯ ಹಿಂದೆ ಪಾಕ್ ಉಗ್ರರ ಕೈವಾಡ – News Mirchi

ಅಮರನಾಥ ಯಾತ್ರಿಗಳ ಮೇಲಿನ ದಾಳಿಯ ಹಿಂದೆ ಪಾಕ್ ಉಗ್ರರ ಕೈವಾಡ

ಸೋಮವಾರ ಜಮ್ಮೂ ಕಾಶ್ಮೀರದಲ್ಲಿ ಅಮರನಾಥ ಯಾತ್ರಿಗಳ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೂರರಿಂದು ಐದು ಜನ ಲಷ್ಕರ್-ಇ-ತೊಯ್ಬಾ ಉಗ್ರರ ಪಾತ್ರವಿದೆ ಎಂದು ಗುಪ್ತಚರ ಮೂಲಗಳು ಹೇಳಿವೆ. ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದ ಉಗ್ರರ ದಾಳಿಯಲ್ಲಿ 7 ಜನ ಯಾತ್ರಿಗಳು ಸಾವನ್ನಪ್ಪಿದ್ದು, 19 ಜನ ಗಾಯಗೊಂಡಿದ್ದರು.

ಪಾಕಿಸ್ತಾನದಿಂದ ಕಾರ್ಯಚರಣೆ ನಡೆಸುವ ಲಷ್ಕರ್ ಕಮಾಂಡರ್ ಇಸ್ಮಾಯಿಲ್, ಕಳೆದ ಮೂರು ವರ್ಷಗಳಿಂದ ದಕ್ಷಿಣ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಲ್ಲಿ ಕ್ರಿಯಾಶೀಲನಾಗಿದ್ದಾನೆ ಎನ್ನಲಾಗಿದೆ. ನಿನ್ನೆ ನಡೆದ ದಾಳಿಯ ಹಿಂದೆ ಈತನ ಕೈವಾಡವಿದೆ ಎಂದು ಹೇಳುತ್ತಿದ್ದಾರೆ.

ಸಾವನ್ನಪ್ಪಿದ ಏಳು ಜನ ಯಾತ್ರಿಗಳ ಮೃತದೇಹಗಳನ್ನು ವಿಮಾನದ ಮೂಲಕ ದೆಹಲಿಗೆ ಕರೆತರಲಾಗಿದೆ.

Loading...