ಎನ್ಕೌಂಟರಿನಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು ಏಳು ನಕ್ಸಲರ ಸಾವು

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಪೊಲೀಸ್ ಎನ್ಕೌಂಟರಿನಲ್ಲಿ ಐದು ಮಹಿಳೆಯರು ಸೇರಿದಂತೆ ಒಟ್ಟು ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಗೆ ನಕ್ಸಲ್ ನಿಗ್ರಹ ಕಾರ್ಯಚರಣೆಗೆ ಹೋಗಿದ್ದಾಗ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು.

ಸ್ಥಳದಿಂದ ಪೊಲೀಸರು ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳು, ನಕ್ಸಲರ ಕಿಟ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಚರಣೆಯಲ್ಲಿ ಕೆಲ ನಕ್ಸಲರು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಅವರಿಗಾಗಿ ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ನಕ್ಸಲರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

Get Latest updates on WhatsApp. Send ‘Subscribe’ to 8550851559