ಬಿಜೆಪಿ ಸೇರಿದ ದೆಹಲಿಯ ಆಪ್ ಶಾಸಕ

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ವೇದ ಪ್ರಕಾಶ್ ಆ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಸಮ್ಮುಖದಲ್ಲಿ ವೇದ ಪ್ರಕಾಶ್ ಬಿಜೆಪಿ ಸೇರಿದರು. ಪಕ್ಷ ಮತ್ತು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವುದಾಗಿ ಅವರು ಪ್ರಕಟಿಸಿದ್ದಾರೆ. ರಾಜೀನಾಮೆ ಪತ್ರವನ್ನು ನೇರವಾಗಿ ವಿಧಾನಸಭೆ ಸ್ಪೀಕರ್ ಗೆ ನೀಡುವುದಾಗಿ ಅವರು ಹೇಳಿದ್ದಾರೆ.

2015 ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಆಮ್ ಆದ್ಮಿ ಪಕ್ಷ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಇನ್ನೂ 35 ಜನ ಶಾಸಕರು ಪಕ್ಷದ ಮೇಲೆ ಅಸಮಾಧಾನ ಹೊಂದಿದ್ದಾರೆ ಎಂದು ಅವರು ಹೇಳಿದ್ದು, ಕಳೆದ ಎರಡು ವರ್ಷಗಳಿಂದಲೂ ತನ್ನ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದೂ ಆರೋಪಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ವೇದ ಪ್ರಕಾಶ್ ಅವರ ಸೇರ್ಪಡೆ ಬಿಜೆಪಿಗೆ ಲಾಭವಾಗಲಿದೆ.

Loading...

Leave a Reply

Your email address will not be published.

error: Content is protected !!