ಜುಲೈ 6 ರಂದು ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ – News Mirchi

ಜುಲೈ 6 ರಂದು ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಜುಲೈ 6 ರಂದು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಸದ್ಯ ಮುಖ್ಯ ಚುನಾವಣಾಧಿಕಾರಿಯಾಗಿರುವ ನಸೀಮ್ ಜೈದಿ ಅಂದೇ ನಿವೃತ್ತರಾಗಲಿದ್ದಾರೆ. ಜೈದಿ ಸ್ಥಾನದಲ್ಲಿ ಅಚಲ್ ಕುಮಾರ್ ಅವರನ್ನು ನೇಮಕ ಮಾಡಿ ನರೇಂದ್ರ ಮೋದಿ ಸರ್ಕಾರ ತೀರ್ಮಾನ ಕೈಗೊಂಡಿತ್ತು.

ಅಚಲ್ ಕುಮಾರ್ ಅವರು ಈ ಹುದ್ದೆಯಲ್ಲಿ ಒಂದು ವರ್ಷ ಸೇವೆ ಸಲ್ಲಿಸಲಿದ್ದಾರೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಚಲ್ ಕುಮಾರ್ ನೇಮಕ ಮಹತ್ವ ಪಡೆದಿದೆ. ಗುಜರಾತ್ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ಅಚಲ್ ಕುಮಾರ್ ಅವರನ್ನು ಮೋದಿ ಸರ್ಕಾರ 2015ರಲ್ಲಿ ಚುನಾವಣಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು.

1975 ಬ್ಯಾಚ್ ನ ಗುಜರಾತ್ ಕೇಡರ್ ಐಎಎಸ್ ಅಧಿಕಾರಿಯಾದ ಅಚಲ್ ಕುಮಾರ್(64), ಗುಜರಾತಿನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕಾಂಡ್ಲಾ ಪೋರ್ಟ್ ಟ್ರಸ್ಟ್ ಛೇರ್ಮನ್, ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ಮೇನೇಜಿಂಗ್ ಡೈರೆಕ್ಟರ್ ಆಗಿ ಕೆಲಸ ಮಾಡಿ ನಿವೃತ್ತರಾಗಿದ್ದಾರೆ. ನಂತರ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದಾರೆ.

Loading...