ರಾಜ್ಯ ಬಿಜೆಪಿ ಜನಪ್ರತಿನಿಧಿಗಳಿಗೆ ಪಾಠ ಮಾಡಿದ ಅಮಿತ್ ಶಾ – News Mirchi

ರಾಜ್ಯ ಬಿಜೆಪಿ ಜನಪ್ರತಿನಿಧಿಗಳಿಗೆ ಪಾಠ ಮಾಡಿದ ಅಮಿತ್ ಶಾ

ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಣತಂತ್ರ ರೂಪಿಸಲು ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರವರು, ಪಕ್ಷ ಅಧಿಕಾರಕ್ಕೆ ಬರಲು ರಾಜ್ಯ ಬಿಜೆಪಿ ಜನಪ್ರತಿನಿದಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವ ಜವಾಬ್ದಾರಿ ಹೈಕಮಾಂಡ್ ಮಾಡಲಿದೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಚುನಾವಣಾ ತಂತ್ರವನ್ನು ಅನುಸರಿಸುವ ಸೂಚನೆಯನ್ನೂ ಅಮಿತ್ ಶಾ ರವರು ನೀಡಿದ್ದಾರೆ.

ಇಂದು ಬೆಂಗಳೂರಿಗೆ ಆಗಮಿಸಿದ ಅವರು ಶಾಸಕರು, ಸಂಸದರು ಮತ್ತು ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಮಾತನಾಡಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುವಂತೆ ಕರೆ ನೀಡಿದ್ದಾರೆ. ಯಾರೂ ಟಿಕೆಟ್ ನಿರೀಕ್ಷೆಯಲ್ಲಿ ಕೆಲಸ ಮಾಡಬಾರದು, ಶಾಸಕರು ತಮ್ಮ ತಮ್ಮ ಕ್ಷೇತ್ರಗಳನ್ನು ಮಾತ್ರವಲ್ಲದೇ ತಮ್ಮ ಪಕ್ಕದ ಕ್ಷೇತ್ರಗಳ ಕಡೆಗೂ ಗಮನ ಕೊಡಬೇಕು, ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೂ ತಲುಪಿಸಬೇಕು ಎಂದು ಸೂಚಿಸಿದ್ದಾರೆ.

Loading...