ರಾಷ್ಟ್ರಪತಿ ಚುನಾವಣೆ: ಮೂವರು ಸದಸ್ಯರ ಸಮಿತಿ ರಚಿಸಿದ ಅಮಿತ್ ಶಾ |News Mirchi

ರಾಷ್ಟ್ರಪತಿ ಚುನಾವಣೆ: ಮೂವರು ಸದಸ್ಯರ ಸಮಿತಿ ರಚಿಸಿದ ಅಮಿತ್ ಶಾ

ರಾಷ್ಟ್ರಪತಿ ಚುನಾವಣೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಜೊತೆ ಮಾತುಕತೆ ನಡೆಸುವ ಸಲುವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ಸಮಿತಿಯಲ್ಲಿ ಗೃಹ ಸಚಿವ ರಾಜನಾಥ ಸಿಂಗ್, ಅರುಣ್ ಜೇಟ್ಲಿ ಮತ್ತು ವೆಂಕಯ್ಯನಾಯ್ಡು ರವರನ್ನು ಇರಲಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅವಧಿ ಮುಕ್ತಾಯದ ನಂತರ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಚುನಾವಣಾ ಆಯೋಗ ಜೂನ್ 7 ರಂದು ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಜುಲೈ 17 ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಿನೇಷನ್ ದಾಖಲಿಸಲು ಜೂನ್ 28 ಕೊನೆಯ ದಿನವಾಗಿದ್ದು, ಜೈಲ್ 20 ರಂದು ಮತ ಎಣಿಕೆ ನಡೆಯಲಿದೆ.

ಬೆಜಿಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯ ವಿರುದ್ಧ ತಮ್ಮ ಅಭ್ಯರ್ಥಿಯನ್ನು ನಿಲ್ಲಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿದ್ದು, ಎಲ್ಲಾ ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದು ಗೂಡಿಸುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶ, ಗುಜರಾತ್, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಮತ್ತು 2019 ರಲ್ಲಿ ಲೋಕಸಭಾ ಚುನಾವಣೆ ಎದುರಾಗಲಿರುವುದರಿಂದ ಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ತಾಕತ್ತು ಪ್ರದರ್ಶಿಲು ಸಿದ್ಧವಾಗುತ್ತಿವೆ.

ಎನ್.ಡಿ.ಎ ಅಬ‍್ಯರ್ಥಿ ವಿರುದ್ಧ ಕಾಂಗ್ರೆಸ್ ನೇತೃತ್ವದ ಗುಂಪಿನಿಂದ ಹಲವು ಅಭ್ಯರ್ಥಿಗಳ ಹೆಸರುಗಳು ಹರಿದಾಡುತ್ತಿವೆ. ಅವುಗಳಲ್ಲಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಹಾಗೂ ಮಹಾತ್ಮಾ ಗಾಂಧಿ ಮೊಮ್ಮಗ ಗೋಪಾಲ್ ಕೃಷ್ಣ ಗಾಂಧಿ, ಮಾಜಿ ಜೆಡಿಯು ಅಧ್ಯಕ್ಷ ಶರದ್ ಯಾದವ್, ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಮತ್ತು ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಮುಂತಾದವರ ಹೆಸರುಗಳು ಮುಂಚೂಣಿಯಲ್ಲಿವೆ. ಆದರೆ ರಾಷ್ಟ್ರಪತಿ ರೇಸ್ ನಲ್ಲಿ ತಾವಿಲ್ಲ ಎಂದು ಈಗಾಗಲೇ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.

Loading...
loading...
error: Content is protected !!