ಭ್ರಷ್ಟಾಚಾರ ನಿಗ್ರಹ ದಳದಿಂದ ಬಿ.ಎಸ್.ವೈ ಮತ್ತು ಅನಂತ್ ಕುಮಾರ್ ವಿರುದ್ಧ ಎಫ್.ಐ.ಆರ್. – News Mirchi

ಭ್ರಷ್ಟಾಚಾರ ನಿಗ್ರಹ ದಳದಿಂದ ಬಿ.ಎಸ್.ವೈ ಮತ್ತು ಅನಂತ್ ಕುಮಾರ್ ವಿರುದ್ಧ ಎಫ್.ಐ.ಆರ್.

ಹೈಕಮಾಂಡ್ ಗೆ ಕಪ್ಪ ಸಲ್ಲಿಸಿದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್.ಐ.ಆರ್. ದಾಖಲಿಸಿಕೊಂಡಿದೆ.

ಆಡಿಯೋ ಕ್ಲಿಪ್ ನಲ್ಲಿನ ಧ್ವನಿ ಇಬ್ಬರೂ ನಾಯಕರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಹೇಳಲಾಗಿದೆ. ಇದರ ಬೆನ್ನಲ್ಲೇ ನಾಯಕರ ವಿರುದ್ಧ ಎಸಿಬಿ ಎಫ್.ಐ.ಆರ್ ದಾಖಲಿಸಿಕೊಂಡಿದೆ. ಬಿಜೆಪಿ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಅವರ ನಡುವೆ ನಡೆದ ಸಂಭಾಷಣೆಯಲ್ಲಿ ಹೈಕಮಾಂಡ್ ಗೆ ಕಪ್ಪ ಸಲ್ಲಿಸಿರುವ ಕುರಿತಂತೆ ಇಬ್ಬರೂ ನಾಯಕರು ಮಾತನಾಡಿಕೊಂಡಿದ್ದ ‘ಆಡಿಯೋ ಸಿಡಿ’ಯನ್ನು ಫೆಬ್ರವರಿಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿತ್ತು.

ತಮ್ಮ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡಿರುವ ಎ.ಸಿ.ಬಿ ಕ್ರಮಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಡದಿಂದ ಎಸಿಬಿ ಉದ್ದೇಶಪೂರ್ವಕವಾಗಿ ಈ ಕ್ರಮಕ್ಕೆ ಮುಂದಾಗಿದೆ, ಇದನ್ನು ನಾವು ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.

Get Latest updates on WhatsApp. Send ‘Add Me’ to 8550851559

Loading...