ಬಳಕೆಯಾಗದ ಭೂಮಿ ಹಿಂದಿರುಗಿಸಲು ಪಿಐಎಲ್: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟೀಸ್ – News Mirchi

ಬಳಕೆಯಾಗದ ಭೂಮಿ ಹಿಂದಿರುಗಿಸಲು ಪಿಐಎಲ್: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟೀಸ್

ವಿಶೇಷ ಆರ್ಥಿಕ ವಲಯಕ್ಕಾಗಿ ರೈತರಿಂದ ವಶಪಡಿಸಿಕೊಂಡ ಜಮೀನಿನಲ್ಲಿ ಉಪಯೋಗಿಸದೇ ಉಳಿದ ಜಮೀನನ್ನು ರೈತರಿಗೆ ಹಿಂತಿರುಗಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಿಗೆ ನೊಟೀಸ್ ಜಾರಿ ಮಾಡಿದೆ.

ಸರ್ಕಾರೇತರ ಸಂಸ್ಥೆ ‘ಎಸ್.ಇ.ಝಡ್ ಫಾರ್ಮರ್ಸ್ ಪ್ರೊಟೆಕ್ಷನ್ ವೆಲ್ಫೇರ್ ಅಸೋಸಿಯೇಷನ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ತ್ರಿಸದಸ್ಯ ಪಿಠ, ಕೇಂದ್ರ ಸರ್ಕಾರ, ತೆಲಂಗಾಣ, ಆಂದ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ಮತ್ತು ಪಂಜಾಬ್ ರಾಜ್ಯಗಳಿಗೆ ಉತ್ತರಿಸಲು ನಾಲ್ಕು ವಾರಗಳ ಗಡುವು ನೀಡಿದೆ.

ಖಾಲಿ ಉಳಿದ ಭೂಮಿಯನ್ನು ರೈತರಿಗೆ ಹಿಂದಿರುಗಿಸುವುದಲ್ಲದೇ, ಇಷ್ಟು ದಿನ ಭೂಮಿಯನ್ನು ಖಾಲಿ ಉಳಿಸಿಕೊಂಡಿದ್ದಕ್ಕಾಗಿ ಪರಿಹಾರ ನೀಡಬೇಕು ಎಂದು ಅರ್ಜಿದಾರ ಕೊಲಿನ್ ಗೊನ್ಸಾವ್ಸ್ ಮನವಿ ಮಾಡಿದ್ದಾರೆ.

Loading...

Leave a Reply

Your email address will not be published.