ಉಗ್ರರ ವಿರುದ್ಧದ ಕಾರ್ಯಚರಣೆಯಲ್ಲಿ ಆರ್ಮಿ ಮೇಜರ್, ಯೋಧನ ಸಾವು – News Mirchi

ಉಗ್ರರ ವಿರುದ್ಧದ ಕಾರ್ಯಚರಣೆಯಲ್ಲಿ ಆರ್ಮಿ ಮೇಜರ್, ಯೋಧನ ಸಾವು

ಜಮ್ಮೂ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಮೇಜರ್ ಹಾಗೂ ಮತ್ತೊಬ್ಬ ಯೋಧ ಸಾವನ್ನಪ್ಪಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿತ್ತು.

ಈ ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿ ಎನ್ನಲಾಗಿದೆ. ಜಿಲ್ಲೆಯ ಜೈಪೋರಾ ವಲಯದಲ್ಲಿ ಉಗ್ರರಿದ್ದಾರೆ ಎಂಬ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಚರಣೆ ಕೈಗೊಂಡಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿಗೆ ಮುಂದಾದರು. ಇನ್ನೂ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತೊಂದು ಕಡೆ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಗೋಪಾಲ್ ಪುರದಲ್ಲಿ ಉಗ್ರರಿರುವ ಮಾಹಿತಿ ಪಡೆದ ಯೋಧರು ಇಬ್ಬರು ಉಗ್ರರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಸತ್ತ ಉಗ್ರರಲ್ಲಿ ಒಬ್ಬ ಈ ಹಿಂದೆ ಬ್ಯಾಂಕ್ ದರೋಡೆಯಲ್ಲಿ ಪಾಲ್ಗೊಂಡಿದ್ದವನು.

Loading...