ಗೋರಕ್ಷಣೆ ಹೆಸರಿನಲ್ಲಿ ಹಿಂಸೆಗಿಳಿದರೆ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಮೋದಿ ಸೂಚನೆ

ನವದೆಹಲಿ: ಗೋ ರಕ್ಷಣೆ ಹೆಸರಿನಲ್ಲಿ ಹಿಂಸೆಗೆ ಮುಂದಾಗುತ್ತಿರುವವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದ್ದಾರೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬೇಡಿ ಎಂದು ಬುದ್ದಿ ಹೇಳಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನಗಳ ಹಿನ್ನೆಲೆಯಲ್ಲಿ ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಗೋವುಗಳನ್ನು ಹಲವರು ತಾಯಿಯಂತೆ ಭಾವಿಸುತ್ತಾರೆ, ಆದರೆ ಗೋರಕ್ಷಣೆ ಹೆಸರಿನಲ್ಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

ಗೋ ರಕ್ಷಣೆ ಹೆಸರಿನಲ್ಲಿ ಕಾನೂನು ಉಲ್ಲಂಘಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನರೇಂದ್ರ ಮೋದಿ ರಾಜ್ಯಗಳಿಗೆ ಸೂಚಿಸಿದ್ದಾರೆ. ಯಾವುದೇ ವ್ಯಕ್ತಿಯಾಗಲಿ, ಗುಂಪಾಗಲೀ ಕಾನೂನು ಕೈಗೆತ್ತಿಕೊಳ್ಳಬಾರು ಎಂದು ಪ್ರಧಾನಿ ಹೇಳಿದ್ದಾಗಿ ಕೇಂದ್ರ ಸಚಿವ ಅನಂತ ಕುಮಾರ್ ಮಾಧ್ಯಮಗಳಿಗೆ ಹೇಳಿದರು.

ಗೋರಕ್ಷಣೆ ಹೆಸರಿನಲ್ಲಿ ದಲಿತರು ಮತ್ತು ಮುಸ್ಲಿಮರನ್ನು ಗುರಿಯಾಗಿಸಿ ದಾಳಿಗಳು ನಡೆಯುತ್ತಿವೆ ಎಂದು ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಸಂಸತ್ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಲು ಉದ್ದೇಶಿಸಿವೆ.

Related News

Loading...
error: Content is protected !!