ಗೋರಖ್ ಪುರ: 6 ದಿನಗಳಲ್ಲಿ ಕನಿಷ್ಟ 60 ಮಕ್ಕಳ ಸಾವು – News Mirchi

ಗೋರಖ್ ಪುರ: 6 ದಿನಗಳಲ್ಲಿ ಕನಿಷ್ಟ 60 ಮಕ್ಕಳ ಸಾವು

ಕಳೆದ 6 ದಿನಗಳಲ್ಲಿ ಉತ್ತರ ಪ್ರದೇಶದ ಗೋರಖ್ ಪುರದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯ ಕೊರತೆ ಮತ್ತು ಸೋಂಕುಗಳಿಂದಾಗಿ ಕನಿಷ್ಟವೆಂದರೂ 60 ಮಕ್ಕಳು ಅಸುನೀಗಿದ್ದಾರೆ. ಗೋರಖ್ ಪುರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾಗಿದ್ದು, ಪ್ರತಿಪಕ್ಷಗಳಿಂದ ಯೋಗಿ ಸರ್ಕಾರ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ.

ಘಟನೆಗೆ ಬಿಜೆಪಿ ನೇತೃತ್ವದ ಸರ್ಕಾರವೇ ಕಾರಣ ಎಂದು ಆರೋಪಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ನಿರ್ಲಕ್ಷ್ಯ ವಹಿಸಿದವರನ್ನು ಶಿಕ್ಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸತ್ಯ ಮುಚ್ಚಿಡಲು ಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಸರ್ಕಾರವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದು, ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಘಟನೆಯ ಕುರಿತು ಯೋಗಿ ಸರ್ಕಾರ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಪ್ರತಿಪಕ್ಷಗಳು ಮಕ್ಕಳ ಸಾವನ್ನು ರಾಜಕೀಯಗೊಳಿಸುತ್ತಿದೆ ಎಂದು ಯೋಗಿ ಸಂಪುಟದ ಸಚಿವರು ಆರೋಪಿಸುತ್ತಿದ್ದಾರೆ. ಪ್ರತಿಪಕ್ಷಗಳು ಈ ದುರಂತವನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಲಿ ಎಂದು ಆರೋಗ್ಯ ಸಚಿವ ಸಿದ್ಧಾರ್ಥನಾಥ್ ಸಿಂಗ್ ಹೇಳಿದ್ದಾರೆ.

Loading...