ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆ ನಿಷೇಧಿಸಿ : ದಿನೇಶ್ ಗುಂಡೂರಾವ್ – News Mirchi

ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆ ನಿಷೇಧಿಸಿ : ದಿನೇಶ್ ಗುಂಡೂರಾವ್

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವ ಕುರಿತು ಕಳೆದ ಕೆಲ ದಿನಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ಹೋರಾಟ ನಡೆಸುತ್ತಿದ್ದು, ಈ ಹೋರಾಟಕ್ಕೆ ಇದೀಗ ಕಾಂಗ್ರೆಸ್‌ ಕೂಡ ಬೆಂಬಲ ನೀಡಿದೆ.

ಧಾರ್ಮಿಕ ಮೂಲಭೂತವಾದಿ ಸಂಘಟನೆಯಾದ ಪಿಎಫ್ಐ ನಂತಹ ಸಂಘಟನೆಗಳು ದೇಶದ ಭದ್ರತೆ ಮತ್ತು ಜಾತ್ಯಾತೀತ ವ್ಯವಸ್ಥೆಗೆ ಗೆ ಧಕ್ಕೆ ತರುತ್ತಿದ್ದು, ಅಂತಹವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್‌ ಗುಂಡು ರಾವ್‌ ಟ್ವೀಟ್‌ ಮಾಡಿ ಮನವಿ ಮಾಡಿದ್ದಾರೆ.

ಈ ಹಿಂದೆ ಬಿಜೆಪಿ ನಾಯಕರ ಹತ್ಯೆಗಳಲ್ಲಿ ಪಿಎಫ್ಐ ಸಂಘಟನೆಯ ಪಾತ್ರ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಸಂಘ ಪರಿವಾರದ ಮುಖಂಡರು, ಬ್ಯಾನ್‌ ಮಾಡಬೇಕೆಂದು ಹೋರಾಟ ನಡೆಸಿದ್ದರು. ಆದರೆ ಕಾಂಗ್ರೆಸ್ಸಿಗರು ಇದಕ್ಕೆ ಮಣೆ ಹಾಕಿರಲಿಲ್ಲ. ದೀಗ ದಿನೇಶ್ ಗುಂಡೂರಾವ್ ನಿಷೇಧಿಸಲು ಹೇಳಿರುವುದು ಆಶ್ಚರ್ಯವನ್ನುಂಟು ಮಾಡುತ್ತಿರುವುದಲ್ಲದೇ ಹಲವರು ಇದನ್ನು ಚುನಾವಣಾ ಗಿಮಿಕ್ ಎಂದಿದ್ದಾರೆ.

Loading...