ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡಿದ್ದ ಬಶೀರ್ ಸಾವು |News Mirchi

ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡಿದ್ದ ಬಶೀರ್ ಸಾವು

ಮಂಗಳೂರು: ಜನವರಿ 3 ರಂದು ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಬಶೀರ್ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಫಾಸ್ಟ್ ಫುಡ್ ಅಂಗಡಿ ಮುಚ್ಚಿ ಮನೆಗೆ ಮರಳುತ್ತಿದ್ದ ಅಬ್ದುಲ್ ಬಶೀರ್ ಮೇಲೆ ದುಷ್ಕರ್ಮಿಗಳು ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು.

ಗಾಯಗೊಂಡಿದ್ದ ಬಶೀರ್ ನನ್ನು ನಗರದ ಎಜೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ಬಶೀರ್ ಸಾವನ್ನಪ್ಪಿದ್ದಾರೆ. ಬಷೀರ್ ಅಂತ್ಯಕ್ರಿಯೆಯನ್ನು ಕೂಳೂರು ಮಸೀದಿಯಲ್ಲಿ ನೆರವೇರಿಸಲಾಗುವುದು ಎಂದ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.

ಜನವರಿ 3 ರಂದು ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆಯಾದ ನಂತರ ಅಂದು ರಾತ್ರಿ ಬಶೀರ್ ಮೇಲೆ ದಾಳಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Loading...
loading...
error: Content is protected !!