ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಕುಲದೀಪ್, ರಿಷಬ್ ಗೆ ಸ್ಥಾನ – News Mirchi

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಕುಲದೀಪ್, ರಿಷಬ್ ಗೆ ಸ್ಥಾನ

ಜೂನ್ 23 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೆಸ್ಟ್ ಇಂಡೀಸ್ ಪ್ರವಾಸವು 5 ಏಕದಿನ ಪಂದ್ಯಗಳು ಮತ್ತು ಒಂದು ಟಿ20 ಪಂದ್ಯ ಹೊಂದಿದೆ.

ವಿರಾಟ್ ಕೊಹ್ಲಿ ನಾಯಕತ್ವದ 15 ಸದಸ್ಯರ ತಂಡದಲ್ಲಿ ರಿಷಬ್ ಪಂತ್ ಮತ್ತು ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಐಪಿಎಲ್ ನಲ್ಲಿ ರಿಷಬ್ ಪಂತ್ ಪ್ರದರ್ಶನವೇ ಅವರಿಗೆ ಈ ಅವಕಾಶದ ಬಾಗಿಲು ತೆರೆದಿದೆ. ರಿಷಬ್ ಪಂತ್ ಅವರ ಆಯ್ಕೆಯೊಂದಿಗೆ ತಂಡದಲ್ಲಿ ಮೂರು ವಿಕೆಟ್ ಕೀಪರ್ ಗಳ ಸೇರ್ಪಡೆಯಾದಂತಾಗಿದೆ. ಎಂ.ಎಸ್.ಧೋನಿ ಮತ್ತು ದಿನೇಶ್ ಕಾರ್ತಿಕ್ ಇತರೆ ಇಬ್ಬರು ವಿಕೆಟ್ ಕೀಪರ್ ಗಳು.

ರೋಹಿತ್ ಶರ್ಮ ಮತ್ತು ಜಸ್ಪ್ರೀತ್ ಬುಮ್ರಾ ರವರಿಗೆ ವಿಶ್ರಾಂತಿ ನೀಡಲಾಗಿದೆ.

ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರಿಶಾಭ್ ಪಂತ್, ಅಜಿಂಕ್ಯ ರಹಾನೆ, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಕುಲದೀಪ್ ಯಾದವ್ ಮತ್ತು ದಿನೇಶ್ ಕಾರ್ತಿಕ್.

Loading...