ಬೆಂಗಳೂರು: ಎಪಿಎಂಸಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

ಬೆಂಗಳೂರು: ಯಲಹಂಕದ ಕೋಗಿಲು ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಎಪಿಎಂಸಿ ಅಧ್ಯಕ್ಷನ ಮೇಲೆ ಇಂದು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಶುಕ್ರವಾರ ಸುಮಾರು 12 ಗಂಟೆಯ ವೇಳೆ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಎಂಬುವವರ ಕಾರಿನ ಮೇಲೆ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಶ್ರೀನಿವಾಸ್ ಅವರ ಬೆನ್ನಿಗೆ ಗುಂಡು ತಗುಲಿದೆ ಎನ್ನಲಾಗಿದ್ದು, ಅವರ ಕಾರು ಚಾಲಕನೂ ಘಟನೆಯಲ್ಲಿ ಗಾಯಗೊಂಡಿದ್ದಾನೆ. ದಾಳಿಯಲ್ಲಿ ಗಾಯಗೊಂಡ ಶ್ರೀನಿವಾಸ್ ಮತ್ತು ಕಾರು ಚಾಲಕನನ್ನು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 2010 ರಲ್ಲಿಯೂ ಶ್ರೀನಿವಾಸ್ ಮೇಲೆ ಗುಂಡಿನ ದಾಳಿ ನಡೆದಿತ್ತು.