ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲಿನಿಂದ ಹೊರಗೆ ತಳ್ಳಿದ ಕಾಮುಕರು – News Mirchi

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲಿನಿಂದ ಹೊರಗೆ ತಳ್ಳಿದ ಕಾಮುಕರು

ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿದ ಗುಂಪೊಂದು ಚಲಿಸುತ್ತಿರುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ರೈಲಿನಿಂದ ಹೊರಗೆ ದೂಡಿದ ಪ್ರಕರಣ ಬಿಹಾರದಲ್ಲಿ ನಡೆದಿದೆ. 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಆರು ಜನರ ಗುಂಪು ಅಪಹರಿಸಿ ವಾನ್ಶಿಪುರ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದು ಲೋಕಲ್ ಟ್ರೈನ್ ನಲ್ಲಿ ಹತ್ತಿದ್ದರು. ರೈಲಿನಲ್ಲಿ ಸಾಮೂಹಿತ ಅತ್ಯಾಚಾರವೆಸಗಿ ನಂತರ ರೈಲು ಕಿಯುಲ್ ಜಂಕ್ಷನ್ ತಲುಪುವ ಮುನ್ನ ರೈಲಿನಿಂದ ಹೊರಗೆ ತಳ್ಳಿದ್ದಾರೆ.

ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಆರೋಗ್ಯ ಕ್ಷೀಣಿಸುತ್ತಿದ್ದಾಗ ವೈದ್ಯರು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಉಳಿದ ಐವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲಿಸರು ಹೇಳಿದ್ದಾರೆ. ಪ್ರಕರಣ ತನಿಖೆ ಮಾಡಿ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Loading...