ಆ ಎರಡೂ ರಾಜ್ಯಗಳಲ್ಲಿ ಬಿಜೆಪಿಯದ್ದೇ ಅಲೆ! – News Mirchi

ಆ ಎರಡೂ ರಾಜ್ಯಗಳಲ್ಲಿ ಬಿಜೆಪಿಯದ್ದೇ ಅಲೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರಿಗೆ ಇದು ಒಳ್ಳೆಯ ಸುದ್ದಿ. ನೋಟು ರದ್ದು, ಜಿಎಸ್ಟಿ ಕುರಿತು ತಮ್ಮ ಪಕ್ಷದವರೇ ಕೆಲ ಮುಖಂಡರು ಟೀಕೆ ಮಾಡುತ್ತಿರುವುದು ಮತ್ತು ಮೋದಿ ಅಲೆ ಕಡಿಮೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಮಲ ಪಕ್ಷದಲ್ಲಿ ಸ್ವಲ್ಪ ಕಳವಳವಿತ್ತು. ಸರಿಯಾಗಿ ಅದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಗಳು ಎದುರಾಗಿದ್ದು, ನಾಯಕರನ್ನು ಮತ್ತಷ್ಟು ಚಿಂತೆಗೀಡು ಮಾಡಿತ್ತು. ಆದರೆ ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಒಪೀನಿಯನ್ ಪೋಲ್ ಸರ್ವೇ ಪ್ರಕಟಿಸಿದೆ. ಇದು ಕಮಲ ನಾಯಕರಿಗೆ ತುಸು ನೆಮ್ಮದಿ ತಂದಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳು ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಹಿಮಾಚಲ ಪ್ರದೇಶ, ಗುಜರಾತ್ ಗಳಲ್ಲಿ ಬೇಕಿರುವ ಬಹುಮತಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿಯೇ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.

ಹಿಮಾಚಲ ಪ್ರದೇಶದಲ್ಲಿ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಆಘಾತ ಕಾದಿದೆ. ಪ್ರತಿಪಕ್ಷ ಬಿಜೆಪಿ ಈ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಮೂರನೇ ಎರಡರಷ್ಟು ಬಹುಮತ ಪಡೆಯುವ ಸಾಧ್ಯತೆಗಳಿಗೆ ಎಂದು ಸಮೀಕ್ಷೆಗಳು ಹೇಳಿವೆ. ಪೋಲ್ ಸರ್ವೇ ಅಂದಾಜಿನ ಪ್ರಕಾರ ಬಿಜೆಪಿ 43-47 ಸೀಟು ಗೆದ್ದರೆ, ಕಾಂಗ್ರೆಸ್ ಪಕ್ಷವು 21-25 ಸ್ಥಾನ ಗಳಿಸಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರ ಸಂಖ್ಯೆ 68.

ಗುಜರಾತ್ ನಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಸಮೀಕ್ಷೆ ಹೇಳಿದೆ. ಇ್ಲಲಿ ಬಿಜೆಪಿಗೆ 115 ರಿಂದ 125 ಸ್ಥಾನ ಲಭಿಸುವ ಸಾಧ್ಯತೆಗಳಿವೆ. ಗುಜರಾತ್ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳಿವೆ. ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಈ ಹಿಂದಿಗಿಂತ ಕೆಲ ಸ್ಥಾನಗಳನ್ನು ಹೆಚ್ಚು ಪಡೆಯಬಹುದು ಎನ್ನಲಾಗಿದೆ. ಈ ಗುಜರಾತ್ ನಲ್ಲಿ ಕಾಂಗ್ರೆಸ್ 57 ರಿಂದ 65 ಸ್ಥಾನಗಳು ಲಭಿಸುವ ಸಾಧ್ಯತೆಗಳಿವೆ.

ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಶೇ.48 ಮತಗಳು, ಕಾಂಗ್ರೆಸ್ ಗೆ ಶೇ.38 ಮತಗಳು ಬರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಪರ ಶೇ.34 ರಷ್ಟು ಜನ ವಿಶ್ವಾಸ ಹೊಂದಿದ್ದರೆ, ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್ ಗೆ ಅವಶ್ಯವಿರುವ ಎಲ್ಲಾ ಸಹಕಾರಗಳನ್ನು ನೀಡುತ್ತಿದ್ದಾರೆ ಎಂದು ಶೇ.66 ಜನ ನಂಬುತ್ತಿದ್ದಾರೆ. ನೋಟು ರದ್ದು ಕ್ರಮಕ್ಕೆ ಶೇ.53 ರಷ್ಟು ಗುಜರಾತಿಗಳು ಅಸಮಾಧಾನ ಹೊಂದಿದ್ದರೆ, ಜಿಎಸ್ಟಿ ಕುರಿತು ಶೇ.51 ರಷ್ಟು ಜನರು ಅಸಮಾಧಾನ ಹೊಂದಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

Get Latest updates on WhatsApp. Send ‘Add Me’ to 8550851559

Loading...