ಉತ್ತರಾಖಂಡದ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್

ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಟ್ಟು 70 ಸದಸ್ಯಬಲದ ಉತ್ತರಾಖಂಡದ ವಿಧಾನಸಭೆ ಚುನಾವಣೆಯಲ್ಲಿ 56 ಸ್ಥಾನ ಗಳಿಸಿದ ಬಿಜೆಪಿ, ಸರ್ಕಾರ ರಚನೆಗೆ ಮುಂದಾಗಿದೆ. ಇಂದು ನಡೆದ ಸಭೆಯಲ್ಲಿ ಬಿಜೆಪಿ ಶಾಸಕರು ತ್ರಿವೇಂದ್ರ ಸಿಂಗ್ ರಾವತ್(56) ರವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ನಾಳೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಮೊದಲು ಆರ್‌ಎಸ್‌ಎಸ್ ಸೇರಿದ್ದ ಇವರು, ನಂತರ ರಾಜಕಾರಣಕ್ಕಿಳಿದಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರವರಿಗೆ ರಾವತ್ ಆಪ್ತರು.

Loading...

Leave a Reply

Your email address will not be published.

error: Content is protected !!